ಬೆಳಗಾವಿ : ರಾಜ್ಯ ಸರ್ಕಾರವು ಒಂದೇ ವಾರದಲ್ಲಿ ಭೂ ಪರಿವರ್ತನೆ ಮಾಡಲು ಅವಕಾಶ ಕಲ್ಪಿಸುವ ಮತ್ತು ಬೆಂಗಳೂರು ಹೊರತುಪಡಿಸಿ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಕೈಗಾರಿಕೋದ್ಯಮ ಉತ್ತೇಜಿಸಲು ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ವಿಧೇಯಕ ಸೇರಿದಂತೆ ಮೂರು ಪ್ರತ್ಯೇಕ ವಿಧೇಯಕಗಳನ್ನು ಮಂಡಿಸಿದೆ.
ಮಂಗಳವಾರ ಸದನದಲ್ಲಿ, 2022ನೇ ಸಾಲಿನ ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ವಿಧೇಯಕ, 2022ನೇ ಸಾಲಿನ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ವಿಧೇಯಕ ಮಂಡನೆ. 2022ನೇ ಸಾಲಿನ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ ಮಂಡನೆ ಮಾಡಲಾಯಿತು.
ರಾಜ್ಯದ ಪೌರಸಂಸ್ಥೆಗಳಲ್ಲಿರುವ ಬಿ ಖಾತೆ ಸಮಸ್ಯೆಗೆ ಪರಿಹಾರ ಸಿಗುವ ಹಾಗೂ ಬೆಂಗಳೂರು ಹೊರತು ಉಳಿದೆಡೆ ಅಕ್ರಮ-ಸಕ್ರಮ ಜಾರಿಗೆ ಸಿದ್ಧತೆ ನಡೆದಿದ್ದು, ಪೌರ ಸಂಸ್ಥೆಗಳಲ್ಲಿ ಇ-ಖಾತೆ ಅನುಷ್ಠಾನಕ್ಕೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಗುವ ಸಾಧ್ಯತೆ ಇದೆ.
ಅಕ್ರಮ-ಸಕ್ರಮ ಬಗ್ಗೆ ನಾಲ್ಕು ಸೂತ್ರಗಳೊಂದಿಗೆ ನಗರಾಭಿವೃದ್ಧಿ ಇಲಾಖೆ ಪ್ರಸ್ತಾವನೆ ಸಿದ್ದಪಡಿಸಿದ್ದು, ನಗರ ಮತ್ತು ಗ್ರಾಮೀಣ ಭಾಗದಲ್ಲಿ ಯಾವ ರೀತಿಯಲ್ಲಿ ಸಕ್ರಮ ಮಾಡಬೇಕು, ಯಾವ ರೀತಿಯಲ್ಲಿ ದಂಡ ಹಾಗೂ ತೆರಿಗೆ ವಿಧಿಸಬೇಕು ಎಂಬ ಬಗ್ಗೆ ಪ್ರಸ್ತಾವನೆಯಲ್ಲಿ ಹೇಳಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಮೂಲಗಳು ತಿಳಿಸಿವೆ.
BIGG NEWS : `KPTCL’ 1,500 ಹುದ್ದೆಗಳ ನೇಮಕಾತಿ ಪರೀಕ್ಷೆ : ಮುಂದಿನ ವಾರ ಕೀ ಉತ್ತರ ಪ್ರಕಟ