ಬೆಳಗಾವಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಮಹಾರಾಷ್ಟ್ರ ಸರ್ಕಾರ ಬಾಯಿಗೆ ಬಂದಂತೆ ಮಾತನಾಡುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ-ಮಹಾರಾಷ್ಟ್ರ ಎರಡೂ ರಾಜ್ಯಗಳ ನಡುವೆ ಗಡಿ ವಿಚಾರ ವಿವಾದವೇ ಅಲ್ಲ, ಮಹಾರಾಷ್ಟ್ರ ಸರ್ಕಾರ ಅನಗತ್ಯವಾಗಿ ಗಡಿ ವಿವಾದ ತೆಗೆಯುತ್ತಿದೆ. ಕರ್ನಾಟಕ, ಮಹಾರಾಷ್ಟ್ರ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ. ಶಾಂತಿ ಕಾಪಾಡುವಂತೆ ಕೇಂದ್ರ ಗೃಹ ಸಚಿವರು ಹೇಳಿದ್ದಾರೆ. ಆದರೂ ಮಹಾರಾಷ್ಟ್ರ ನಾಯಕರು ಗಡಿ ವಿವಾದದ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ ಎಂದರು.
Watch : ರಾಜಸ್ಥಾನದ ಕೋಟಾದಲ್ಲಿ ಗೂಳಿಯೊಂದು ವಯೋವೃದ್ಧನಿಗೆ ದಾಳಿಗೈದ ಆಘಾತಕಾರಿ video viral