ಬೆಂಗಳೂರು : ಚೀನಾದಲ್ಲಿ ಕೊರೋನಾ ಸೋಂಕು ಹೆಚ್ಚಳ ಬೆನ್ನಲ್ಲೆ ಭಾರತದಲ್ಲಿ ಕೋವಿಡ್ ಅಲರ್ಟ್ ಘೋಷಣೆಯಾಗಿದೆ.
ಹೊರದೇಶಗಳಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಲು ಬಿಬಿಎಂಪಿ ಚಿಂತನೆ ನಡೆಸಿದೆ .
ಹೊಸ ವರ್ಷಕ್ಕೆ ಜನಸಂದಣಿ ಹೆಚ್ಚಾಗುವ ಸಾಧ್ಯತೆಯಿದ್ದು, ಕೋವಿಡ್ ಸಲಹಾ ಸಮಿತಿಗೆ ಈಗಾಗಲೇ ಈ ಬಗ್ಗೆ ಬಿಬಿಎಂಪಿ ಮನವಿ ಸಲ್ಲಿಸಿದೆ. ಮಾರ್ಕೆಟ್, ಮಾಲ್, ಥಿಯೇಟರ್, ಪಾರ್ಕ್, ಮೆಟ್ರೋ, ಬಸ್,ಏರ್ ಪೋರ್ಟ್ ನಲ್ಲಿ ಮಾಸ್ಕ್ ಕಡ್ಡಾಯ ಮಾಡಬೇಕೆಂದು ಬಿಬಿಎಂಪಿ ಚಿಂತನೆ ನಡೆಸಿದೆ.. ಮೊದಲ ಹಂತದಲ್ಲಿ ಯಾವುದೇ ಫೈನ್ ಇಲ್ಲದೇ ಮಾಸ್ಕ್ ಧರಿಸುವಂತೆ ಅರಿವು ಮೂಡಿಸಬೇಕು ಎಂದು ಮನವಿ ಸಲ್ಲಿಸಲಾಗಿದೆ.
ಚಳಿಗಾಲ ಆಗಿರೋದ್ರಿಂದ ಶೀತ, ಜ್ವರ ಕೆಮ್ಮು ಸಹಜವಾಗಿದೆ. ಕೋವಿಡ್ ಪ್ರಕರಣಗಳ ಬಗ್ಗೆ ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆಗೆ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು ಮಾಡಲಾಗಿದೆ. ಜೊತೆಗೆ ಆಸ್ಪತ್ರೆಗೆ ತೆರಳುವ ರೋಗಿಗಳಿಗೆ ಮಾಸ್ಕ ಧರಿಸೋದಕ್ಕೆ ಸೂಚಿಸಿ ಈ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣ ವೈದ್ಯರ ಸಲಹೆ ಪಡೆಯಿರಿ ಎಂದು ರಾಜ್ಯದಲ್ಲಿ ಮಹಮಾರಿ ಕೋವಿಡ್ ಬಗ್ಗೆ ಎಚ್ಚರಿಕೆ ನೀಡಲಾಗಿದೆ.