ಗದಗ : ಕಳೆದ ಆರು ತಿಂಗಳಿಂದ ಹದಗೆಟ್ಟಿದ್ದ ಜಿಲ್ಲೆಯ ಲಕ್ಷ್ಮೇಶ್ವರ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ದುರಸ್ತಿಗಾಗಿ ವಿವಿಧ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ, ರಸ್ತೆಯ ಮಧ್ಯದಲ್ಲೇ ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದು, ಲಕ್ಷ್ಮೇಶ್ವರವನ್ನು ಸಂಪೂರ್ಣ ಬಂದ್ ಮಾಡಲಾಗಿದೆ
ಲಕ್ಷ್ಮೇಶ್ವರ ಪಟ್ಟಣದಲ್ಲಿ ವ್ಯಾಪಾರಸ್ಥರು ಅಂಗಡಿ-ಮುಗ್ಗಟ್ಟುಗಳು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿ, ಸಂಪೂರ್ಣ ಬಂದ್ಗೆ ಬೆಂಬಲ ಸೂಚಿಸಿದ್ದಾರೆ. ಕೈಗಾ-ಇಳಕಲ್ ಹೆದ್ದಾರಿ ದುರಸ್ತಿಗೆ ಅಧಿಕಾರಿಗಳು ಈವರೆಗೆ ಯಾರು ತಲೆಕೆಡಿಸಿಕೊಂಡಿಲ್ಲ ಹಾಗಾಗಿ ಬೀದಿಗಿಳಿದು ಹೋರಾಟ ಮಾಡೋದಕ್ಕೆ ಮುಂದಾಗಿದ್ದೇವೆಂದು ಸಂಘಟನೆಯ ಕಾರ್ಯಕರ್ತರು ತಿಳಿಸಿದ್ದಾರೆ