ಬೆಂಗಳೂರು : ಗಾಂಜಾ ಪ್ರಮಾಣ ನಿರ್ಧರಿಸುವಾಗ ಬೀಜ, ಎಲೆಯ ತೂಕ ಬಿಡುವಂತಿಲ್ಲ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.
ಗಾಂಜಾ ಪ್ರಮಾಣ ನಿರ್ಧರಿಸುವಾಗ ಬೀಜ, ಎಲೆ, ಹೂವಿನ ತೂಕ ಪರಿಗಣಿಸದಂತೆ ಆರೋಪಿ ರಂಗಪ್ಪ ಎಂಬಾತ ಹೈಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಗಾಂಜಾ ಪ್ರಮಾಣವನ್ನು ನಿರ್ಧರಿಸುವಾಗ ಗಾಂಜಾದ ಬೀಜ, ಎಲೆ, ಹೂವಿನ ತೂಕ ಬಿಡುವಂತಿಲ್ಲ, ಅದನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂದು ಆದೇಶ ಹೊರಡಿಸಿ ಆರೋಪಿ ರಂಗಪ್ಪ ಅರ್ಜಿಯನ್ನು ತಳ್ಳಿ ಹಾಕಿದೆ.
ಗಾಂಜಾ ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ನಟರಾಜನ್ ಅವರಿದ್ದ ಪೀಠ ಈ ಬಗ್ಗೆ ಆದೇಶ ಹೊರಡಿಸಿದೆ.ಗಾಂಜಾ ಗಿಡದ ಬೀಜ, ಎಲೆ. ಹೂಗಳನ್ನು ಪರಿಗಣಿಸಬೇಕು, ಗಾಂಜಾ ಪ್ರಮಾಣ ನಿರ್ಧರಿಸುವಾಗ ಬೀಜ, ಎಲೆ ತೂಕವನ್ನು ಕಳೆಯುವಂತಿಲ್ಲ ಎಂದು ಹೈಕೋರ್ಟ್ ಆದೇಶ ಹೊರಡಿಸಿದ್ದು, ಆರೋಪಿ ಪರ ವಕೀಲದ ವಾದವನ್ನು ಹೈಕೋರ್ಟ್ ತಳ್ಳಿ ಹಾಕಿದೆ.ಇತ್ತೀಚೆಗೆ ಆರೋಪಿ ರಂಗಪ್ಪನಿಂದ 750 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿತ್ತು. ನಂತರ ಆರೋಪಿ ಗಾಂಜಾದ ಹೂ, ಎಲೆ, ಬೀಜದ ತೂಕವನ್ನು ಪರಿಗಣಿಸದಂತೆ ಹೈಕೋರ್ಟ್ ಗೆ ಸಲ್ಲಿಸಿದ್ದನು,
ಕೋವಿಡ್ ಸೋಂಕಿತರ ಪರೀಕ್ಷಾ ಮಾದರಿಗಳ ಜೀನೋಮ್ ಸೀಕ್ವೆನ್ಸಿಂಗ್ಗೆ ಕ್ರಮ: ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆ
ಮಂಗಳೂರು : ಅಯ್ಯಪ್ಪ ಮಾಲಾಧಾರಿ ವಿದ್ಯಾರ್ಥಿ ಮೇಲೆ ಅನ್ಯಕೋಮಿನ ವಿದ್ಯಾರ್ಥಿಗಳಿಂದ ಹಲ್ಲೆ
ಕೋವಿಡ್ ಸೋಂಕಿತರ ಪರೀಕ್ಷಾ ಮಾದರಿಗಳ ಜೀನೋಮ್ ಸೀಕ್ವೆನ್ಸಿಂಗ್ಗೆ ಕ್ರಮ: ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆ