ಬೆಳಗಾವಿ : ಕೆ.ಎಸ್.ಈಶ್ವರಪ್ಪ ಹಿರಿಯ ನಾಯಕ, ಅವರಿಗೆ ಅಸಮಾಧಾನ ಇಲ್ಲ. ಈಗ ರಮೇಶ್ , ಈಶ್ವರಪ್ಪ ಭೇಟಿ ಮಾಡುತ್ತೇನೆ, ಸಚಿವ ಸಂಪುಟ ವಿಸ್ತರಣೆ ವಿಚಾರ ಬಂದಾಗ ವಿಷಯ ತಿಳಿಸುತ್ತೇನೆ ಎಂದು ಬೆಳಗಾವಿಯಲ್ಲಿ ಬೊಮ್ಮಾಯಿ ಹೇಳಿದರು.
ಹೊರ ದೇಶದಲ್ಲಿ ಕೋವಿಡ್ ಭೀತಿ ಹಿನ್ನೆಲೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ ಶೀಘ್ರವೇ ಈ ಬಗ್ಗೆ ಸರ್ಕಾರ ಸಭೆ ನಡೆಸಿ ಮಹತ್ವದ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.
ಕೋವಿಡ್ ಭೀತಿ ಹಿನ್ನೆಲೆ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಸದ್ಯದಲ್ಲೇ ರಾಜ್ಯ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಸಭೆ ನಡೆಸಿ ಹಲವು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.