ಬೆಳಗಾವಿ : ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಉತ್ತರ ಕರ್ನಾಟಕಕ್ಕೆ ಬಂಪರ್ ಗಿಫ್ಟ್ ಘೋಷಣೆ ಮಾಡುವ ಸಾಧ್ಯತೆ ಇದೆ.
BIGG NEWS : ಕ್ರಿಸ್ ಮಸ್ ಹಬ್ಬಕ್ಕೆ ಸಾಲು ಸಾಲು ರಜೆ : ಖಾಸಗಿ ಬಸ್ ಟಿಕೆಟ್ ದರ ಭಾರೀ ಏರಿಕೆ!
ಇಂದು ಸಂಜೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಅಂದಾಜು 6 ಸಾವಿರ ಕೋಟಿ ರೂ.ಗಳಷ್ಟು ಬೃಹತ್ ಮೊತ್ತದ ಯೋಜನೆಗಳನ್ನು ಕೈಗೊಳ್ಳಲಿದೆ ಎನ್ನಲಾಗಿದೆ. ಉತ್ತರ ಕರ್ನಾಟಕದ ಬೆಳಗಾವಿ, ಹಾವೇರಿ, ವಿಜಯಪುರ ಜಿಲ್ಲೆಗಳಿಗೆ ಹಲವು ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಉತ್ತರ ಕರ್ನಾಟಕದಲ್ಲಿ ಬಾಕಿ ಉಳಿದಿರುವ ಕೆಲ ಯೋಜನೆಗಳು ಹಾಗೂ ನೀರಾವರಿ ಸೌಲಭ್ಯಗಳು, ಜೊತೆಗೆ ರಸ್ತೆ, ಮೂಲಸೌಕರ್ಯ, ಶಿಕ್ಷಣ, ಆರೋಗ್ಯಕ್ಕೆ ಸಂಬಂಧಿಸಿದಂತೆ ಯೋಜನೆಗಳನ್ನು ಕೈಗೊಳ್ಳುವ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಈ ಭಾಗದ ಜನರಲ್ಲಿ ವಿಶ್ವಾಸ ಮೂಡಿಸಲು ಮುಂದಾಗಿದೆ ಎನ್ನಲಾಗಿದೆ.