ಬೆಳಗಾವಿ : ಶೀಘ್ರವೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ವಸತಿ ಸಾಲೆ ಕಾರ್ಯಾರಂಭ ಮಾಡಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಮಹಾವಿದ್ಯಾಲಯದ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ 221 ಕೋಟಿ ರೂ. ವೆಚ್ಚದಲ್ಲಿ ರಾಯಣ್ಣ ಸೈನಿಕ ಶಾಲೆ ನಿರ್ಮಿಸಲಾಗಿದ್ದು, ಈ ವರ್ಷವೇ ಆರಂಭವಾಗಲಿದೆ ನಂದಗಡದ ವೀರಭೂಮಿಯಲ್ಲಿ 75 ಕೋಟಿ ವೆಚ್ಚದಲ್ಲಿ ಮ್ಯೂಸಿಯಂ ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.
BIGG NEWS : ಕ್ರಿಸ್ ಮಸ್ ಹಬ್ಬಕ್ಕೆ ಸಾಲು ಸಾಲು ರಜೆ : ಖಾಸಗಿ ಬಸ್ ಟಿಕೆಟ್ ದರ ಭಾರೀ ಏರಿಕೆ!
ಸುವರ್ಣಸೌಧದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಮಹಾತ್ಮಾ ಗಾಂಧಿಜೀಯವರ ಮೂರ್ತಿಗಳನ್ನೂ ಸ್ಥಾಪನೆ ಮಾಡಲಾಗುವುದು. ಚೆನ್ನಮ್ಮ ವಿವಿ ಮುಂದೆ ರಾಣಿ ಚೆನ್ನಮ್ಮ ಮೂರ್ತಿ ಸ್ಥಾಪನೆ ಮಾಡಲು ಅನುದಾನ ನೀಡಲಾಗುವುದು. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಕುಲಪತಿಗಳು ಈ ಕುರಿತು ಹೆಚ್ಚಿನ ಮಾಹಿತಿಗಳನ್ನು ವಿದ್ಯಾರ್ಥಿಗಳಿಗೆ ನೀಡಬೇಕು ಎಂದರು.