ಹಾಸನ: ಜಿಲ್ಲೆಯ ಅರಕಲಗೂಡು ತಾಲೂಕಿನಲ್ಲಿ ಹಾಸ್ಟೆಲ್ ನ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ವಸತಿ ಶಾಲೆಯ ಪ್ರಾಂಶುಪಾಲನನ್ನು ಪೊಲೀಸರು ಬಂಧಿಸಿದ್ದಾರೆ.
BIGG NEWS : ಕೋವಿಡ್ ಆತಂಕ : ರಾಜ್ಯದಲ್ಲಿ ಶೀಘ್ರವೇ ಹೊಸ ಮಾರ್ಗಸೂಚಿ ಬಿಡುಗಡೆ : ಆರೋಗ್ಯ ಸಚಿವ ಸುಧಾಕರ್
ವಸತಿ ಶಾಲೆಯ ಪ್ರಾಂಶುಪಾಲ ಶಿವಕುಮಾರ್ ಬಂಧಿತ ಆರೋಪಿಯಾಗಿದೆ. ಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ ಹಾಸ್ಟೆಲ್ನ ವಿದ್ಯಾರ್ಥಿನಿಯರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದರು. ದೂರಿನ ಅನ್ವಯ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಕ್ಕಳೊಂದಿಗೆ ಆಪ್ತ ಸಮಾಲೋಚನೆ ನಡೆಸಿದ್ದಾರೆ.
ಆಪ್ತ ಸಮಾಲೋಚನೆ ವೇಳೆ ಪ್ರಾಂಶುಪಾಲ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ವೇಳೆ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಹೆಚ್.ಟಿ ಕೋಮಲ ಪ್ರಾಂಶುಪಾಲ ಶಿವಕುಮಾರ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.