ಬೆಂಗಳೂರು: ಏರ್ ಪೋರ್ಟ್ ನಲ್ಲಿ ಬಾಂಬ್ ಹಾಕುವುದಾಗಿ ಬೆದರಿಕೆ ಟ್ವೀಟ್ ಮಾಡಿದ ವ್ಯಕ್ತಿಯನ್ನ ಈಶಾನ್ಯ ವಿಭಾಗದ ಸೈಬರ್ ಪೊಲೀಸರು ಪತ್ತೆ ಮಾಡಿ ಬಂಧಿಸಿದ್ದಾರೆ.
BIGG NEWS: ಸುವರ್ಣಸೌಧದಲ್ಲಿ ಪಂಚಮಸಾಲಿ 2ಎ ಮೀಸಲಾತಿ ಒತ್ತಾಯಿಸಿ ಪ್ರತಿಭಟನೆ; ಪೊಲೀಸ್ ಬಿಗಿ ಬಂದೋಬಸ್ತ್
20 ವರ್ಷದ ವೈಭವ್ ಗಣೇಶ್ ಬಂಧಿತ. ಡಿ. 10ರಂದು ಆರೋಪಿ ತನ್ನ ಟ್ವಿಟರ್ ಖಾತೆಯಲ್ಲಿ ನಾನು ಬೆಂಗಳೂರು ಏರ್ಪೋರ್ಟ್ಗೆ ಬಾಂಬ್ ಹಾಕುತ್ತೇನೆ ಎಂದು ಇಂಗ್ಲಿಷ್ನಲ್ಲಿ ಟ್ವೀಟ್ ಮಾಡಿದ್ದ. ಈ ಟ್ವೀಟ್ ಅನ್ನು ಬೆಂಗಳೂರು ವಿಮಾನ ನಿಲ್ದಾಣದ ಅಧಿಕೃತ ಟ್ವಿಟರ್ ಖಾತೆಗೂ ಟ್ಯಾಗ್ ಮಾಡಿದ್ದನು.ಬಾಂಬ್ ಬೆದರಿಕೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಏರ್ ಪೋರ್ಟ್ ಮ್ಯಾನೇಜರ್ ಪ್ರಕರಣ ದಾಖಲು ಮಾಡಿದ್ದರು. ಪ್ರಕರಣದ ಕುರಿತು ಸೈಬರ್ ಕ್ರೈಮ್ ಪೊಲೀಸರ ಸಹಯೋಗದೊಂದಿಗೆ ಸಿಟಿ ಪೊಲೀಸರು ತನಿಖೆ ಆರಂಭಿಸಿದ್ದರು.