ದಾವಣಗೆರೆ : ದಾವಣಗೆರೆ ನಗರದಲ್ಲಿ ಹಾಡಹಗಲೇ ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
BIGG NEWS : ಈಶ್ವರಪ್ಪ, ಜಾರಕಿಹೊಳಿ ಬೆನ್ನಲ್ಲೇ ಸಚಿವ ಸ್ಥಾನದ ಬೇಡಿಕೆ ಇಟ್ಟ ಶಾಸಕ ಎಂ.ಪಿ. ರೇಣುಕಾಚಾರ್ಯ
ದಾವಣಗೆರಯ ಪಿಜೆ ಬಡಾವಣೆಯ ಚರ್ಚ್ ಬಳಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವತಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಯುವತಿಯನ್ನು ವಿನೋಬಾನಗರದ ನಿವಾಸಿ ಚಾಂದ್ ಸುಲ್ತಾನಾ (24) ಎಂದು ಗುರುತಿಸಲಾಗಿದೆ.
ಚಾಂದ್ ಸುಲ್ತಾನಾಳಿಗೆ 8 ತಿಂಗಳ ಹಿಂದೆ ಹರಿಹರ ಮೂಲದ ಯುವಕನೊಂದಿಗೆ ನಿಶ್ಚಿತಾರ್ಥ ಆಗಿತ್ತು. ವಿವಾಹಕ್ಕೆ ವಿರೋಧಿಸಿ ಸುಲ್ತಾನಳನ್ನು ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದ್ದು, ದಾವಣಗೆರೆ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.