ಬೆಳಗಾವಿ: ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪ ವೇಳೆ ಚಿರತೆ ಹಾವಳಿ ಬಗ್ಗೆ ಟಿ. ನರಸೀಪುರ ಶಾಸಕ ಅಶ್ವಿನ್ ಕುಮಾರ್ ಪ್ರಸ್ತಾಪಿಸಿದ್ದಾರೆ. ಮೈಸೂರು ಟಿ.ನರಸೀಪುರದಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಮಂಜುನಾಥ್ , ಮೇಘನಾ, ಸತೀಶ್ ಹಾಗೂ ನಿಂಗೇಗೌಡ ಎಂಬುವರ ಮೇಲೆ ಮೇಲೆ ದಾಳಿ ಮಾಡಿದೆ
ಟಿ. ನರಸೀಪುರದಲ್ಲಿ ಚಿರತೆ ಹಾವಳಿ ಹೆಚ್ಚಾಗಿ ಜನ ಆತಂಕದಲ್ಲಿದ್ದಾರೆ. ಕಬ್ಬು ಕಟಾವಿನ ವೇಳೆ ಮರಿ ಹಾಕಿದ್ದು, ಕಟಾವು ಮಾಡಲು ಬಿಡುತ್ತಿಲ್ಲ ಎಂದರು.
ಈ ವೇಳೆ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಮಧ್ಯಪ್ರವೇಶಿಸಿ, ನಮ್ಮ ಕ್ಷೇತ್ರದಲ್ಲಿ ಕೂಡ ಚಿರತೆ ಹಾವಳಿ ಹೆಚ್ಚಾಗಿದೆ ಎಂದರು. ಇದಕ್ಕೆ ಹಾಸ್ಯ ಚಟಾಕಿ ಹಾರಿಸಿದ ಸ್ಪೀಕರ್, ಡಾಕ್ಟ್ರೆ ನಿಮ್ಮ ಕ್ಷೇತ್ರದ ಚಿರತೆ ಬೇರೆ, ನಮ್ಮ ಕ್ಷೇತ್ರದ ಚಿರತೆ ಬೇರೆ ಅಂತ ಇದೆಯಾ ಎಂದರಚಿರತೆ ಹಾವಳಿ ಹೆಚ್ಚಳಕ್ಕೆ ಕಬ್ಬು ಕಟಾವು ಮಾಡದಿರುವುದು ಕಾರಣವಾಗಿದೆ.
ಇದಕ್ಕೆ ಶಾಸಕ ಅಶ್ವಿನ್ ಮಾತನಾಡಿ, ಕುರಿ, ಕೋಳಿ, ದನಗಳ ಮೇಲೆ ದಾಳಿ ಮಾಡಿದರೆ ಸಮಸ್ಯೆ ಇರಲಿಲ್ಲ. ಆದರೆ ಅವುಗಳು ನೇರವಾಗಿ ಮನುಷ್ಯರ ಮೇಲೆ ದಾಳಿ ಮಾಡುತ್ತಿದ್ದು, ಸರ್ಕಾರ ಪರಿಹಾರ ಒದಗಿಸಬೇಕು ಎಂದರು. ಮಾಗಡಿ ಶಾಸಕ ಮಂಜುನಾಥ್ ಮಧ್ಯಪ್ರವೇಶಿಸಿ, ಅರಣ್ಯ ಇಲಾಖೆಯಲ್ಲಿ ಬೋನ್ಗಳ ಕೊರತೆ ಇದೆ. ಎರಡು ಮೂರು ಬೋನ್ ಮಾತ್ರ ಇದೆ. ಚಿರತೆ ಅಂದಾಗ ಒಂದು ಕಡೆಯಿಂದ ಮತ್ತೊಂದು ಕಡೆಗೆ ಬೋನ್ ತೆಗೆದುಕೊಂಡು ಹೋಗಿ ಇಡುತ್ತಾರೆ. ಮೂವತ್ತು, ನಲವತ್ತು ಬೋನ್ ಮಾಡಿಸುವಂತೆ ಮನವಿ ಮಾಡಿದರು. ಇದು ಇಡೀ ಸದನದ ಸಮಸ್ಯೆಯಾಗಿದೆ. ಇದು ಗಂಭೀರ ಸಮಸ್ಯೆಯಾಗಿದ್ದು, ಮನುಷ್ಯರ ಮೇಲೆ ದಾಳಿ ಮಾಡುತ್ತಿದೆ. ಸಮಸ್ಯೆ ಜೊತೆ ಪರಿಹಾರ ಹುಡುಕಬೇಕಿದೆ ಎಂದು ಸ್ಪೀಕರ್ ಹೇಳಿದರು.
̲