ಶಿವಮೊಗ್ಗ: ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದ ಪ್ರಸಿದ್ಧ ಗಮಕ ಕಲಾವಿದ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹೆಚ್ ಆರ್ ಕೇಶವಮೂರ್ತಿ ಅಂತ್ಯಕ್ರಿಯೆ ಹೊಸಹಳ್ಳಿಯಲ್ಲಿ ಸರ್ಕಾರಿ ಗೌರವದೊಂದಿಗೆ ನೆರವೇರಿತು.
ಕೇಶವಮೂರ್ತಿ ಸರ್ಕಾರಿ ಗೌರವದೊಂದಿಗೆ ಅಂತಿಮ ಕ್ರಿಯೆ ನಡೆಸಲು ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಕುಮಾರ್ ಆದೇಶಿಸಿದ್ದರು.ಮಹಾನಗರಪಾಲಿಕೆ ಮಹಾಪೌರ ಶಿವಕುಮಾರ್ ಸೇರಿದಂತೆ ಇತರ ಗಣ್ಯರು ಪಾರ್ಥೀವ ಶರೀರಕ್ಕೆ ಪುಷ್ಟ ನಮನ ಸಲ್ಲಿಸಿದರು.
ನಂತರ ಶಿಷ್ಟಾಚಾರದಂತೆ ಪೊಲೀಸ್ ಗೌರವದೊಂದಿಗೆ ಕುಶಾಲತೋಪು ಹಾರಿಸಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಈ ವೇಳೆ ಮೃತರ ಪತ್ನಿ, ಪುತ್ರಿ, ಬಂಧುಗಳು, ವಿಪ್ರ ಸಮಾಜದ ಮುಖಂಡರು, ಸಾರ್ವಜನಿಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗಿಯಾಗಿದ್ದರು.