ಬೆಳಗಾವಿ : ಕೋವಿಡ್ ನಿಂದಾಗಿ ಅವಧಿ ಮುನ್ನವೇ ಚುನಾವಣೆ ನಡೆಯಲಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಅವಧಿಗೂ ಮುನ್ನವೇ ಚುನಾವಣೆ ಮಾಡುವ ಯಾವುದೇ ಪ್ರಸ್ತಾವನೆ ನಮ್ಮ ಮುಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಸುವರ್ಣಸೌಧದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಕೋವಿಡ್ ನಿಂದಾಗಿ ಅವಧಿ ಮುನ್ನವೇ ಚುನಾವಣೆ ನಡೆಯಲಿದೆ ಹಾಗೂ ದೆಹಲಿಯ ನಾಯಕರು ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಸಿಎಂ ಸ್ಪಷ್ಟನೆ ನೀಡಿದ್ದಾರೆ. ಅವಧಿಗೂ ಮುನ್ನವೇ ಚುನಾವಣೆ ಮಾಡುವ ಯಾವುದೇ ಪ್ರಸ್ತಾವನೆ ನಮ್ಮ ಮುಂದಿಲ್ಲ ಎಂದರು.
ಯಾವುದೇ ದೇಶದಲ್ಲಿ ಕೊರೊನಾ ಹೆಚ್ಚಳವಾದ್ರೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತದೆ. ಕೊರೊನಾ ಪ್ರಮಾಣ ಹೆಚ್ಚಳ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೊರೊನಾ ಪ್ರಮಾಣ ಹೆಚ್ಚಳ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಬೂಸ್ಟರ್ ಡೋಸ್ ಪಡೆಯುವ ಬಗ್ಗೆ ಜನರಲ್ಲಿ ಇನ್ನೂ ಆಸಕ್ತಿ ಬಂದಿಲ್ಲ. ಕೊರೊನಾ ಹರಡದಂತೆ ತಡೆಗಟ್ಟಲು ಸಭೆ ಕರೆಯಲಾಗಿದೆ.ಆರೋಗ್ಯ ಇಲಾಖೆಯ ಅಧಿಕಾರಿಗಳು, ತಜ್ಞರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಎಲ್ಲರೂ ಸಹಕರಿಸಿದ್ರೆ ಸಾವು-ನೋವು ತಡೆಗಟ್ಟಬಹುದು ಎಂದರು.
BIGG NEWS: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹೆಚ್ ಆರ್ ಕೇಶವಮೂರ್ತಿ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ