ಬೆಂಗಳೂರು: ಕೋವಿಡ್ ತಳಿಯಾದ ಒಮಿಕ್ರಾನ್ ಉಪ-ರೂಪಾಂತರ ಬಿಎಫ್7 ಪತ್ತೆಯಾಗಿದೆ.ಇದರಿಂದ ಕರ್ನಾಟಕದಲ್ಲಿ ಆತಂಕ ಶುರುವಾಗಿದೆ.
ಇದೀಗ ರಾಜ್ಯದಲ್ಲಿ ಸಭೆ ಚರ್ಚೆಗಳು ಜೋರಾಗಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಆರೋಗ್ಯ ಇಲಾಖೆ ಮುಂಜಾಗ್ರತೆ ವಹಿಸಲು ಕ್ರಮವಹಿಸಿದೆ.ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ನಿನ್ನೆಯಿಂದ ಸ್ಕ್ರೀನಿಂಗ್ ಆರಂಭ ಮಾಡಲಾಗಿದೆ.ಏರ್ಪೋರ್ಟ್ನಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ನಿನ್ನೆಯಿಂದ ಪ್ರಯಾಣಿಕರ ಸ್ಕ್ರೀನಿಂಗ್ ಮಾಡಿ ಜ್ವರ ಮತ್ತು ಕೊರೊನಾ ಲಕ್ಷಣಗಳ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ.
ಮೂರು ಪಾಳಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆರೋಗ್ಯ ಇಲಾಖೆ ಸಿಬ್ಬಂದಿ ನೇಮಕ ಮಾಡಲಾಗಿದ್ದು, ವಿದೇಶದಿಂದ ಬರುವ ಪ್ರಯಾಣಿಕರಿಗೆ ಮಾತ್ರ ಸ್ಕ್ರೀನಿಂಗ್ ಮಾಡಲಾಗುತ್ತಿದೆ.ಆರೋಗ್ಯ ಇಲಾಖೆಯ 10 ಮಂದಿಯನ್ನು ಒಂದು ಪಾಳಯದಂತೆ ಕೆಲಸ ಮಾಡಲು ನಿಯೋಜಿಸಲಾಗಿದೆ. ಅಗತ್ಯ ಮಾರ್ಗಸೂಚಿಗಳು ಸರ್ಕಾರದಿಂದ ಬಂದ ನಂತರ ಏರ್ಪೋರ್ಟ್ನಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಆರೋಗ್ಯ ಇಲಾಖೆ ತಿಳಿಸಿದೆ.