ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಸಮುದ್ರವಳ್ಳಿ ಬಳಿ ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಗರ್ಭಿಣಿ ಬಲಿಯಾಗಿರುವ ಘಟನೆ ನಡೆದಿದೆ.
BIGG NEWS: ಕರ್ನಾಟಕದಲ್ಲಿ ಕೊರೊನಾ ಆತಂಕ; ಏರ್ ಪೋರ್ಟ್ ನಲ್ಲಿ ಮತ್ತೆ ಸ್ಕ್ರೀನಿಂಗ್ ಆರಂಭ
ಮೃತ ಗರ್ಭಿಣಿಯನ್ನು ರೋಹಿಣಿ ಎಂದು ಗುರುತಿಸಲಾಗಿದೆ. ಮಗಳ ಸಾವಿಗೆ ಪತಿಯೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.
ಮೇ 28ರಂದು ಕೆ.ಆರ್.ನಗರ ತಾಲೂಕಿನ ಪಶುಪತಿ ಗ್ರಾಮದ ಕುಮಾರ್-ಸುಧಾ ದಂಪತಿಯ ಮಗಳು ರೋಹಿಣಿಯನ್ನು ಅರಕಲಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದ ಸುಮಂತ್ ಎಂಬಾತನಿಗೆ ಕೇರಾಳಪುರದ ಕಲ್ಯಾಣಮಂಟಪದಲ್ಲಿ ಅದ್ಧೂರಿಯಾಗಿ ವಿವಾಹ ಮಾಡಿಕೊಟ್ಟಿದ್ದರು. ಮದುವೆ ವೇಳೆ ಸುಮಂತ್ಗೆ 250 ಗ್ರಾಂ ಚಿನ್ನ ಇದರ ಜೊತೆಗೆ 20 ಲಕ್ಷ ರೂ. ಖರ್ಚು ಮಾಡಿ ಮದುವೆ ಮಾಡಿದ್ದರು.
BIGG NEWS: ಕರ್ನಾಟಕದಲ್ಲಿ ಕೊರೊನಾ ಆತಂಕ; ಏರ್ ಪೋರ್ಟ್ ನಲ್ಲಿ ಮತ್ತೆ ಸ್ಕ್ರೀನಿಂಗ್ ಆರಂಭ
ಸುಮಂತ್ನ ತಂದೆ ಮೃತಪಟ್ಟಿದ್ದರಿಂದ, ತಾಯಿ ಮೀನಾಕ್ಷಿ ಜೊತೆ ಆತ ವಾಸವಿದ್ದನು.ಮದುವೆಯಾದ ಎರಡು ತಿಂಗಳು ದಂಪತಿ ಇಬ್ಬರು ಅನ್ಯೋನ್ಯವಾಗಿದ್ದರು. ಆದರೆ 2 ತಿಂಗಳು ಕಳೆಯುತ್ತಿದ್ದಂತೆ ಸುಮಂತ್ ತಾಯಿ ಮೀನಾಕ್ಷಿ ವರದಕ್ಷಿಣೆ ಹಣ ತರುವಂತೆ ಕಿರುಕುಳ ನೀಡಲು ಆರಂಭಿಸಿದ್ದಳು. ಈ ಸಂಬಂಧ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.