ಬೆಳಗಾವಿ : ಕೋವಿಡ್ ನಿಯಂತ್ರಣ ಸಂಬಂಧ ಸಿಎಂ ಬೊಮ್ಮಾಯಿ ( Chief Minster Basavaraj Bommai) ನೇತೃತ್ವದಲ್ಲಿ ಮಹತ್ವದ ಸಭೆ ಆರಂಭವಾಗಿದೆ.
ಬೆಳಗಾವಿಯ ಸುವರ್ಣಸೌಧದ 3 ನೇ ಮಹಡಿಯಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ಆರಂಭವಾಗಿದ್ದು, ಸಭೆಯಲ್ಲಿ ಆರೋಗ್ಯ ಸಚಿವ ಸುಧಾಕರ್, ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದಾರೆ.
ಕೋವಿಡ್ ಹೆಚ್ಚುತ್ತಿರುವ ಬಗ್ಗೆ ರಾಜ್ಯ ಗಂಭೀರವಾಗಿ ತೆಗೆದುಕೊಂಡಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿನ ಬೆಳವಣಿಗೆಗಳು, ಕೇಂದ್ರ ಆರೋಗ್ಯ ಇಲಾಖೆಯ ಸೂಚನೆಗಳು, ಯಾವ ರೀತಿ ಪರೀಕ್ಷೆಗಳು ಹೆಚ್ಚಿಸಬೇಕು. ಜಿನೊಮೆಟಿಕ್ ಪರೀಕ್ಷೆ ಮಾಡುವ ಬಗ್ಗೆ, ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ಸುದೀರ್ಘವಾದ ಕಾರ್ಯಕ್ರಮ ರೂಪಿಸಲು ಗುರುವಾರ ಸಭೆಯನ್ನು ಕರೆಯಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಹೀಗಾಗಿ ಇಂದು ಸಿಎಂ ಕರೆದಿರುವಂತ ಕೋವಿಡ್ ಕಂಟ್ರೋಲ್ ಸಭೆ ಮಹತ್ವ ಮೂಡಿಸಿದ್ದು, ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ ನಿಯಮ ಜಾರಿಯಾಗಲಿದೆಯಾ ಎನ್ನುವ ಕೂತೂಹಲ ಮೂಡಿಸಿದೆ.
BIGG NEWS: ಹಾಸನದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಗರ್ಭಿಣಿ ಬಲಿ
ಶಿವಮೊಗ್ಗ: ಅಧಿಕೃತ ಸರ್ಕಾರಿ ನೌಕರರಿಗೆ ಮಾತ್ರ ಮಾಹಿತಿ ನೀಡಬೇಕು – DC ಡಾ.ಆರ್.ಸೆಲ್ವಮಣಿ ಖಡಕ್ ಸೂಚನೆ