ಬೆಳಗಾವಿ: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ( Government Pre-University College ) ಖಾಲಿ ಇರುವಂತ 814 ಉಪನ್ಯಾಸಕರ ಹುದ್ದೆಗಳನ್ನು ( Lecturer Post ) ಶೀಘ್ರವೇ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂಬುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ( Minister BC Nagesh ) ತಿಳಿಸಿದ್ದಾರೆ.
‘ವರಿಷ್ಠರು ಒಪ್ಪಿದರೆ ಮಂತ್ರಿಗಿರಿ, ಒಪ್ಪದಿದ್ದರೆ ದಾದಾಗಿರಿ’ : ಬಿಜೆಪಿ ವಿರುದ್ಧ ಟ್ವೀಟ್ ನಲ್ಲಿ ಕಾಂಗ್ರೆಸ್ ವ್ಯಂಗ್ಯ
ವಿಧಾನಸಭಯಲ್ಲಿ ಇಂದು ಸದಸ್ಯ ಯಮಕನಮರಡಿ ಕೇಳಿದಂತ ಚುಕ್ಕೆ ಗುರಿತಿಲ್ಲದ ಪ್ರಶ್ನೆಗೆ ಉತ್ತರಿಸಿರುವಂತ ಅವರು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ 12,858 ಉಪನ್ಯಾಸಕರ ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 3,941 ಹುದ್ದೆಗಳು ಖಾಲಿ ಇರುತ್ತವೆ ಎಂದು ತಿಳಿಸಿದ್ದಾರೆ.
ಮೂಡ್ನಾಕೂಡು ಚಿನ್ನಸ್ವಾಮಿ, ಪದ್ಮರಾಜ ದಂಡಾವತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಇನ್ನೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 814 ಉಪನ್ಯಾಸಕರ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಭರ್ತಿ ಮಾಡಲು ಕ್ರಮವಹಿಸಲಾಗಿದೆ. ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳದ ರೋಸ್ಟರ್ ಬಿಂದುಗಳನ್ನು ಗುರುತಿಸುವ ಪ್ರಕ್ರಿಯೆ ಅಂತಿಮಗೊಂಡ ನಂತ್ರ, ನೇರ ನೇಮಕಾತಿ ಮತ್ತು ಮುಂಬಡ್ತಿಗೆ ಚಾಲನೆ ನೀಡಲಾಗುವುದು ಎಂದಿದ್ದಾರೆ.