ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 19 ರಿಂದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇದೀಗ ಇಂದಿನ ಕಲಾಪಕ್ಕೆ ತೆರೆ ಬಿದ್ದಿದೆ. ವಿಧಾನಸಭೆ ಕಲಾಪ ನಾಳೆ ಬೆಳಗ್ಗೆ 10:30 ಕ್ಕೆ ಗಂಟೆಗೆ ಮುಂದೂಡಿಕೆ ಮಾಡಲಾಗಿದೆ.
ಮಹಾರಾಷ್ಟ್ರದ ನಾಯಕರಿಂದ ಬೆಳಗಾವಿ ಗಡಿಯ ಕುರಿತಂತೆ ದಿನೇ ದಿನೇ ಕಿರಿಕ್ ತೆಗೆಯಲಾಗುತ್ತಿದೆ. ಇಂತಹ ಮಹಾ ನಾಯಕರ ವಿರುದ್ಧ ಇಂದು ವಿಧಾನಸಭೆಯಲ್ಲಿ ಖಂಡನಾ ನಿರ್ಣಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದರು. ಈ ನಿರ್ಣಯಕ್ಕೆ ಸರ್ವಾನುಮತದಿಂದ ಅಂಗೀಕಾರವನ್ನು ದೊರೆತಿದೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವಂತ ಚಳಿಗಾಲದ ಅಧಿವೇಶನದ ವೇಳೆಯಲ್ಲಿ ಮಹಾರಾಷ್ಟ್ರದ ನಾಯಕರು ಗಡಿ ಖ್ಯಾತೆ ತೆಗೆದಿದ್ದರು. ಈ ಹಿನ್ನಲೆಯಲ್ಲಿ ಮಹಾರಾಷ್ಟ್ರ ನಾಯಕರ ನಡೆಯನ್ನು ಖಂಡಿಸಿ, ವಿಧಾನಸಭೆಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಖಂಡನಾ ನಿರ್ಣಯವನ್ನು ಮಂಡಿಸಿದರು. ಮಹಾ ನಾಯಕರ ವರ್ತನೆ ಖಂಡಿಸಿದ ಖಂಡನಾ ನಿರ್ಣಯಕ್ಕೆ, ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರ ದೊರೆಯಿತು. ಈ ಮೂಲಕ ಗಡಿ ಕ್ಯಾತೆ ತೆಗೆದಂತ ಮಹಾರಾಷ್ಟ್ರ ನಾಯಕರಿಗೆ ಖಡಕ್ ಉತ್ತರವನ್ನು ನೀಡಲಾಗಿದೆ.
ಇನ್ನೂ, ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಒಟ್ಟು 13 ಅತ್ಯಂತ ಪ್ರಮುಖ ನೀರಾವರಿ ಯೋಜನೆಗಳಿಗೆ ಇಂದಿನ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ. ಇದರಿಂದ ಒಟ್ಟು 5701.38 ಕೋಟಿ ರೂಪಾಯಿಗಳ ವೆಚ್ಚದ ಮಹತ್ವದ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.
Job Alert: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಒಂದು ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ – ಸಿಎಂ ಬೊಮ್ಮಾಯಿ ಘೋಷಣೆ
ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ನೀಡುವ ಪರಿಹಾರಧನ ರೂ.15 ಲಕ್ಷಕ್ಕೆ ಹೆಚ್ಚಳ -ಸಚಿವ ಆರ್.ಅಶೋಕ