ಬೆಳಗಾವಿ: 2027ರ ಹೊತ್ತಿಗೆ ರಾಜ್ಯದಲ್ಲಿ 25 ಸಾವಿರ ನವೋದ್ಯಮಗಳು ನೆಲೆಯೂರುವಂತೆ ಮಾಡುವ ಗುರಿಯುಳ್ಳ 2022-27ರ ನಡುವಿನ ಐದು ವರ್ಷಗಳ ಅವಧಿಯ ಹೊಸ ಸ್ಟಾರ್ಟಪ್ ನೀತಿಗೆ ರಾಜ್ಯ ಸಚಿವ ಸಂಪುಟವು ಗುರುವಾರ ಅನುಮೋದನೆ ನೀಡಿದೆ ಎಂದು ಐಟಿ ಮತ್ತು ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಈ ವಿಷಯ ತಿಳಿಸಿದ್ದಾರೆ.
ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್: ‘ಇ-ಖಾತೆ ಸಮಸ್ಯೆ’ ಬಗೆಹರಿಸಿದ ರಾಜ್ಯ ಸರ್ಕಾರ
“ರಾಜ್ಯದಲ್ಲಿ ಸದ್ಯಕ್ಕೆ 15 ಸಾವಿರ ಸ್ಟಾರ್ಟಪ್ಗಳಿವೆ. ಹೊಸ ನೀತಿಯಿಂದಾಗಿ ಇನ್ನೂ 10 ಸಾವಿರ ನವೋದ್ಯಮಗಳು ನಮ್ಮಲ್ಲಿ ಅಸ್ತಿತ್ವಕ್ಕೆ ಬರಲಿವೆ. ಎಲೆಕ್ಟ್ರಾನಿಕ್ಸ್, ಐಟಿ-ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆ ರೂಪಿಸಿರುವ ಈ ನೀತಿಯು ಕರ್ನಾಟಕವನ್ನು ದೇಶದ ಸ್ಟಾರ್ಟಪ್ ವಲಯದಲ್ಲಿ ‘ಚಾಂಪಿಯನ್ ರಾಜ್ಯ’ವನ್ನಾಗಿ ಪ್ರತಿಷ್ಠಾಪಿಸುವ ಗುರಿ ಹೊಂದಿದೆ. ಇದರ ಭಾಗವಾಗಿ ಅಧಿಕ ಪ್ರಮಾಣದ ಬೆಳವಣಿಗೆ ದಾಖಲಿಸುವಂಥ ಸ್ಟಾರ್ಟಪ್ಗಳ ಸಂಖ್ಯೆಯನ್ನು ಹೆಚ್ಚು ಮಾಡಲಾಗುವುದು” ಎಂದು ವಿವರಿಸಿದ್ದಾರೆ.
ಹೊಸ ನೀತಿಯು ಮುಖ್ಯವಾಗಿ ಬೆಂಗಳೂರಿನಿಂದ ಹೊರಗಿರುವ ತಂತ್ರಜ್ಞಾನ ಕ್ಲಸ್ಟರ್ಗಳಲ್ಲಿ ನವೋದ್ಯಮಗಳನ್ನು ಪ್ರೋತ್ಸಾಹಿಸಲಿದ್ದು, ಇದು ನನಸಾಗುವಂಥ ಕಾರ್ಯ ಪರಿಸರವನ್ನು ನಿರ್ಮಿಸಲಿದೆ. ಜತೆಗೆ ಸಾಮಾಜಿಕ ಉದ್ಯಮಶೀಲತೆ, ಅಧುನಿಕ ತಂತ್ರಜ್ಞಾನ ಮತ್ತು ಸಾಮಾಜಿಕ ಆಡಳಿತದಲ್ಲಿ ನಾವೀನ್ಯತೆಯ ತಂತ್ರಜ್ಞಾನ ಕ್ಷೇತ್ರಗಳಿಗೆ ಇದು ಇಂಬು ನೀಡಲಿದೆ. ಈ ಮೂಲಕ ಈಗ ನಾವು ಎದುರಿಸುತ್ತಿರುವ ಪರಿಸರ, ಸಾಮಾಜಿಕ ಮತ್ತು ಆಡಳಿತಾತ್ಮಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದ್ದು, ಸುಸ್ಥಿರ ಅಭಿವೃದ್ಧಿಯನ್ನು ಸಾಧಿಸಬಹುದಾಗಿದೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರಿನ ‘ರೇನ್ಬೋ ಚಿಲ್ಡ್ರನ್ ಆಸ್ಪತ್ರೆ ಹೆರಿಗೆ ಕೇಂದ್ರ’ವನ್ನು ನಟಿ ಅಮೂಲ್ಯ ಉಧ್ಘಾಟನೆ
ರಾಜ್ಯವು ಜಾಗತಿಕ ಮಟ್ಟದಲ್ಲಿ ಸ್ಟಾರ್ಟಪ್ ಹಬ್ ಆಗಬೇಕೆನ್ನುವುದು ಸರಕಾರದ ಗುರಿಯಾಗಿದೆ. ಇದಕ್ಕಾಗಿ ಈ ವಲಯದ ಬೆಳವಣಿಗೆ ಮತ್ತು ವಹಿವಾಟಿಗೆ ಮುಕ್ತ ಉತ್ತೇಜನ ಕೊಡಲಾಗುವುದು. ಒಟ್ಟು 9 ಅಂಶಗಳ ಆಧಾರದ ಮೇಲೆ ರೂಪಿಸಿರುವ ಈ ನೀತಿಯು ಸರಕಾರಿ ಸಂಸ್ಥೆಗಳಲ್ಲಿ ಮೂಲಸೌಲಭ್ಯವನ್ನು ಅಭಿವೃದ್ಧಿ ಪಡಿಸುವ ಮತ್ತು ‘ಬಿಯಾಂಡ್ ಬೆಂಗಳೂರು’ ಉಪಕ್ರಮವನ್ನು ಸಾಕಾರಗೊಳಿಸುವ ಗುರಿಗಳನ್ನೂ ಹೊಂದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಮಂಗಳೂರು ವಿವಿ ಫಲಿತಾಂಶ ಹತ್ತು ದಿನದೊಳಗಾಗಿ ಪ್ರಕಟ – ಸಚಿವ ಅಶ್ವತ್ಥನಾರಾಯಣ
ಇದಲ್ಲದೆ, ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆಯ ಕೌಶಲ್ಯಗಳಿಗೆ ಪ್ರೋತ್ಸಾಹ ನೀಡುವುದು, ಸಾಮಾಜಿಕ ಆಡಳಿತ ವಲಯದಲ್ಲಿ ತಂತ್ರಜ್ಞಾನ ಆಧಾರಿತ ಪರಿಹಾರಗಳನ್ನು ರೂಪಿಸುವುದು, ಇನ್ಕ್ಯುಬೇಷನ್ ಕೇಂದ್ರಗಳ ಸ್ಥಾಪನೆ ಮತ್ತು ಅಭಿವೃದ್ಧಿ, ಸಾಂಸ್ಥಿಕ ಹೂಡಿಕೆದಾರರು ಮತ್ತು ಏಂಜೆಲ್ ಹೂಡಿಕೆದಾರರ ಜತೆಗೆ ಸರಕಾರದ ಮೂಲಕವೂ ನವೋದ್ಯಮಗಳಲ್ಲಿ ಬಂಡವಾಳ ಹೂಡಲು ಅವಕಾಶಗಳನ್ನು ಸೃಷ್ಟಿಸುವ ಗುರಿಗಳನ್ನೂ ಹೊಸ ಸ್ಟಾರ್ಟಪ್ ನೀತಿಯು ಹೊಂದಿದೆ ಎಂದು ಸಚಿವರು ತಿಳಿಸಿದ್ದಾರೆ.