ಚಿತ್ರದುರ್ಗ : ಕಾಂಗ್ರೆಸ್ ನಾಯಕ ಬಿ ಸೋಮಶೇಖರ್ ಮೇಲೆ ಮಾಜಿ ಸಚಿವ ಡಿ. ಸುಧಾಕರ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಧರ್ಮಪುರ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಎಂಎಲ್ಸಿ ಪರಾಜಿತ ಅಭ್ಯರ್ಥಿ ಬಿ ಸೋಮಶೇಖರ್ ಮೇಲೆ ಮಾಜಿ ಸಚಿವ ಡಿ. ಸುಧಾಕರ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಸದ್ಯ ಬಿ ಸೋಮಶೇಖರ್ ರನ್ನು ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್ ಅವರು ಧರ್ಮಪುರ ಗ್ರಾಮಕ್ಕೆ ಆಗಮಿಸಿದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ವೇದಿಕೆಯಲ್ಲಿ ಮಯೂರ ಜಯಕುಮಾರ್ ಕುಳಿತಿದ್ದಾಗ ಮಾಜಿ ಸಚಿವ ಡಿ ಸುಧಾಕರ್ ಬೆಂಬಲಿಗರು ಜೈಕಾರ ಕೂಗಿದ್ದು, ಇದಕ್ಕೆ ಸಿಟ್ಟಾದ ಸುಧಾಕರ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.ಹಲ್ಲೆಗೊಳಗಾದ ಕಾಂಗ್ರೆಸ್ ನಾಯಕ ಬಿ. ಸೋಮಶೇಖರ್ ಅವರು ಹಾಗೂ ಅವರ ಕಾರ್ಯಕರ್ತರು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ, ಮಾಜಿ ಸಚಿವ ಡಿ ಸುಧಾಕರ್ ಬೆಂಬಲಿಗರ ಮೇಲೂ ಹಲ್ಲೆಯಾಗಿದ ಎಂಬ ಆರೋಪ ಕೇಳಿಬಂದಿದ್ದು, .ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಪ್ಪ ಹಾಗೂ ತಿಪ್ಪೇಸ್ವಾಮಿ ಮಲ್ಲಪ್ಪನ ಹಳ್ಳಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಹಿಂದೆ ಹಿರಿಯೂರು ನಗರದ ಹೊರವಲಯದಲ್ಲಿ ನಡೆದ ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮದಲ್ಲಿ ಪ್ಲೆಕ್ಸ್ ಕಟ್ಟುವ ವಿಚಾರದಲ್ಲಿ ಸಹ ಇಬ್ಬರು ನಾಯಕರ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು.
‘ಸಾಮಾಜಿಕ ಜಾಲತಾಣ’ಗಳಲ್ಲಿ ಮಕ್ಕಳಿಗೆ ಸಂಬಂಧಿಸಿದ ಸುದ್ದಿ ಹಾಕೋ ಮುನ್ನ ಎಚ್ಚರ.! ಯಾಕೆ ಅಂತ ಈ ಸುದ್ದಿ ಓದಿ