ಬೆಳಗಾವಿ : ಪಂಚಮಸಾಲಿಗೆ 2 ಎ ಮೀಸಲಾತಿ ನೀಡುವ ಬದಲು ಹೊಸ ಪ್ರವರ್ಗ ನೀಡಲು ಚಿಂತನೆ ನಡೆಸಿದ್ದು, 2 ಸಿ ಅಥವಾ 3 ಸಿ ಎಂಬ ಪ್ರತ್ಯೇಕ ವರ್ಗೀಕರಣ ಮಾಡುವುದು ಸೂಕ್ತ ಎಂದು ಹಿಂದುಳಿದ ವರ್ಗಗಳ ಆಯೋಗ ಸರ್ಕಾರಕ್ಕೆ ಶಿಫಾರಸು ಮಾಡಿದೆ ಎನ್ನಲಾಗಿದೆ.
ಪಂಚಮಸಾಲಿ ಸಮುದಾಯದವರು ಮೀಸಲಾತಿಗೆ ಆಗ್ರಹಿಸಿ ಪ್ರತಿಭಟಟನೆ ನಡೆಸುತ್ತಿದ್ದಂತೆ ಸಿಎಂ ಬಸವರಾಜ ಬೊಮ್ಮಾಯಿ ಆಯೋಗದ ಅಧ್ಯಕ್ಷರಾದ ಜಯ ಪ್ರಕಾಶ್ ಹೆಗ್ಡೆಯನ್ನು ಬೆಳಗಾವಿಗೆ ಕರೆಸಿಕೊಂಡು ಚರ್ಚೆ ನಡೆಸಿದ್ದಾರೆ. ವಿವಿಧ ಸಮುದಾಯದ ಮುಖಂಡರ ಅಭಿಪ್ರಾಯ ಪಡೆದು ನಂತರವಷ್ಟೃ ಸಮಗ್ರ ವರದಿ ಪಡೆಯಲು ಸಾಧ್ಯ ಎಂದು ಹೆಗ್ಡೆ ಅವರಿ ಸಿಎಂ ಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಕಾನೂನಾತ್ಮಕ ಚರ್ಚೆ
ಹಿಂದುಳಿದ ವರ್ಗದ ಆಯೋಗದ ಮಧ್ಯಂತರ ವರದಿಯನ್ನು ಆದಷ್ಟು ಬೇಗನೇ ಕಾನೂನಾತ್ಮಕ ಚರ್ಚೆ ಮಾಡಿ , ಎಲ್ಲ ಪಕ್ಷದ ನಾಯಕರೊಂದಿಗೆ ಸಮಾಲೋಚಿಸಿ ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ನಿನ್ನೆ ಬೆಳಗಾವಿ ಸುವರ್ಣಸೌಧದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಹಿಂದುಳಿದ ವರ್ಗ ಆಯೋಗದ ಅಧ್ಯಕ್ಷರ ಜಯಪ್ರಕಾಶ ಹೆಗ್ಡೆಯವರು ಭೇಟಿಯಾಗಿ ಮಧ್ಯಂತರ ವರದಿಯನ್ನು ನೀಡಿದ್ದಾರೆ. ಈ ವರದಿಯನ್ನು ಪರಿಶೀಲಿಸಿ, ಕಾನೂನು ಮತ್ತುಸಂಸದೀಯ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಕಾನೂನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ನಾಗಮೋಹನ್ ದಾಸ್ ವರದಿ ಬಂದು ಒಂದು ವರ್ಷದ ನಂತರ ವಿವರಗಳನ್ನು ನೀಡಲಾಗಿತ್ತು. ಸದಾಶಿವ ಆಯೋಗ ವರದಿ ಬಂದು ಹತ್ತು ವರ್ಷವಾಗಿದ್ದು, ಸರ್ಕಾರದ ಒಪ್ಪಿಗೆ ಪಡೆದಿಲ್ಲವಾದ್ದರಿಂದ ಇನ್ನೂ ವಿವರ ನೀಡಲಾಗಿಲ್ಲ. ಕಾಂತರಾಜು ವರದಿ ಇನ್ನೂ ಆಯೋಗದಲ್ಲೇ ಇದ್ದು, ಸರ್ಕಾರದ ಮಟ್ಟಕ್ಕೆ ಬಂದಿಲ್ಲವಾದ್ದರಿಂದ ವಿವರ ನೀಡಲಾಗಿಲ್ಲ. ಆದರೆ ಹಿಂದುಳಿದ ವರ್ಗದ ಆಯೋಗದ ಮಧ್ಯಂತರ ವರದಿ ಬಗ್ಗೆ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
BIGG NEWS : ಕಾಡಾನೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ : ಸಚಿವ ಆರ್.ಅಶೋಕ್
‘ಗಾಂಜಾ’ ಪ್ರಮಾಣ ನಿರ್ಧರಿಸುವಾಗ ಬೀಜ, ಎಲೆ ತೂಕವನ್ನೂ ಪರಿಗಣಿಸಿ: ಹೈಕೋರ್ಟ್ ಆದೇಶ