ಬೆಳಗಾವಿ : ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮಹಿಳ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಗುಡ್ ನ್ಯೂಸ್ ನೀಡಿದ್ದು, 10,000 ರೂ ಗೌರವಧನ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಸಲೀಂ ಅಹಮದ್ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯದ ಎಲ್ಲಾ ಮಿನಿ ಅಂಗನವಾಡಿಗಳನ್ನು ಪೂರ್ಣಾವಧಿ ಅಂಗನವಾಡಿಗಳಾಗಿ ಮೇಲ್ದರ್ಜೆಗೇರಿಸಿ ಕಾರ್ಯಕರ್ತೆಯರಿಗೆ 10,000 ರೂ ಗೌರವಧನ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಮಿನಿ ಅಂಗನವಾಡಿಗಳು ಪೂರ್ಣಾವಧಿಯಲ್ಲಿ ಕಾರ್ಯ ನಿರ್ವಹಿಸದ ಕಾರಣ ಸದ್ಯ 7,500 ರೂ ವೇತನ ನೀಡಲಾಗುತ್ತಿದೆ, ಮುಂದಿನ ದಿನಗಳಲ್ಲಿ ಮಿನಿ ಅಂಗನವಾಡಿಗಳನ್ನು ಪೂರ್ಣಾವಧಿ ಅಂಗನವಾಡಿಗಳಾಗಿ ಮೇಲ್ದರ್ಜೆಗೇರಿಸಿ ಕಾರ್ಯಕರ್ತೆಯರಿಗೆ 10,000 ರೂ ಗೌರವಧನ ನೀಡಲಾಗುತ್ತದೆ ಎಂದು ಹೇಳುವ ಮೂಲಕ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.
ಇನ್ನೂ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರ ಸೇವೆಯು ಕೇಂದ್ರ ಪುರಸ್ಕೃತ ಯೋಜನೆಯಡಿಯಲ್ಲಿ ಗೌರವ ಸೇವೆಯಾಗಿರುವುದರಿಂದ ಮತ್ತು ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರನ್ನು ಕಾರ್ಮಿಕರೆಂದು ಪರಿಗಣಿಸದಿರುವುದರಿಂದ ಇವರಿಗೆ ಇಎಸ್ ಐ ಸೌಲಭ್ಯ ವಿಸ್ತರಿಸಲು ಅವಕಾಶವಿರುವುದಿಲ್ಲ ಹಾಗೂ ಕನಿಷ್ಟ ವೇತನ ಕಾಯ್ದೆ ಇವರಿಗೆ ಅನ್ವಯಿಸುವುದಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಅಭಿವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಆಚಾರ ಹಾಲಪ್ಪ ಬಸಪ್ಪ ತಿಳಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರುಗಳಿಗೆ ಸರ್ಕಾರವು ಹೆಚ್ಚಿನ ಪ್ರೋತ್ಸಾಹವನ್ನು ನೀಡುವ ಬದಲಿಗೆ ಇವರಿಗೆ ಕನಿಷ್ಠ ಪ್ರಮಾಣದ ಗೌರವ ಧನವನ್ನು ನೀಡುತ್ತಿದೆ. ಈ ಅಂಗನವಾಡಿ ಉದ್ಯೋಗಿಗಳಿಗೆ ಸರ್ಕಾರವು ಸಾಮಾಜಿಕ, ಆರ್ಥಿಕ ಮತ್ತು ಔದ್ಯಮಿಕ ಭದ್ರತೆಯನ್ನು ಒದಗಿಸುವ ಕಾಳಜಿ ತೋರದೆ ಕೇವಲ ದುಡಿಮೆಗಾಗಿ ಬಳಕೆಯ ವಸ್ತುಗಳಂತೆ ವ್ಯವಹರಿಸುತ್ತಿರುವುದು ಶೋಷಣಾಣಾತ್ಮಕ ಧೋರಣೆಯಾಗಿದೆ. ಈ ನೌಕರಿಗೆ ಸಾಮಾಜಿಕ ಸುರಕ್ಷ ಯೋಜನೆಯಾದ ಇ.ಎಸ್.ಐ. ಸೌಲಭ್ಯ ಹಾಗೂ ಸರ್ಕಾರಿ ನೌಕರರಿಗೆ ರೂಪಿಸಿರುವ ನೌಕರ ಸ್ನೇಹಿ ಉಚಿತ ವೈದ್ಯಕೀಯ ಯೋಜನೆಯನ್ನು ಇವರಿಗೂ ಸಹ ವಿಸ್ತರಿಸದೇ ವಿಚಾರವು ಗಂಭೀರವಾಗಿದೆ. ನಿಸ್ವಾರ್ಥತೆ ಮತ್ತು ಸೇವಾ ಮನೋಭಾವದಿಂದ ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಮಸ್ಯೆಯನ್ನು ಚರ್ಚಿಸಿ ಸೂಕ್ತ ಪರಿಹಾರವನ್ನು ಒದಗಿಸಬೇಕು ಎಂದು ಸದಸ್ಯ ಸಲೀಂ ಅಹ್ಮದ್ ಅವರು ನಿಯಮ 330ರಡಿ ಮಂಡಿಸಿದ ವಿಷಯಕ್ಕೆ ಸಚಿವರು ಲಿಖಿತ ಹೇಳಿಕೆಯಲ್ಲಿ ಈ ವಿಷಯ ತಿಳಿಸಿದ್ದಾರೆ.
BREAKING NEWS : ರಂಗಸ್ಥಳದಲ್ಲೇ ಹೃದಯಾಘಾತವಾಗಿ ಕಟೀಲು ಯಕ್ಷಗಾನ ಕಲಾವಿದ ‘ಗುರುವಪ್ಪ ಬಾಯಾರು’ ನಿಧನ
BIGG NEWS : ಗ್ರಾಮ ಪಂಚಾಯತಿ ಸದಸ್ಯರಿಗೂ ಪಿಂಚಣಿ ಸೌಲಭ್ಯ : ಸಿಎಂ ಬೊಮ್ಮಾಯಿ ಘೋಷಣೆ