ಬೆಳಗಾವಿ : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಯಾವ ವಿದ್ಯಾರ್ಥಿ ವೇತನವನ್ನು ಕೂಡ ಸ್ಥಗಿತಗೊಳಿಸಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.
ನಿನ್ನೆ ನಡೆದ ಅಧಿವೇಶನದಲ್ಲಿ ಮಾತನಾಡಿದ ಸಚಿವರು 1 ರಿಂದ 8 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ವಿದ್ಯಾರ್ಥಿ ವೇತನ ನೀಡಲಿದೆ. ಪರಿಶಿಷ್ಟ ವರ್ಗದ ಮತ್ತು ಒಬಿಸಿ ಮಕ್ಕಳಿಗೆ ಯಥಾ ಸ್ಥಿತಿಯಲ್ಲಿ ವಿದ್ಯಾರ್ಥಿ ವೇತನ ಮುಂದುವರೆಯಲಿದೆ ಎಂದು ಹೇಳಿದ್ದಾರೆ.
ಎಲ್ಲಾ ಹಂತದ ವಿದ್ಯಾರ್ಥಿ ವೇತನ ಮುಂದುವರೆಯಲಿದೆ. ವಿದ್ಯಾರ್ಥಿಗಳು ಆತಂಕಪಡುವುದು ಬೇಡ, ಯಾವ ವಿದ್ಯಾರ್ಥಿ ವೇತನವನ್ನು ಸ್ಥಗಿತ ಮಾಡುವುದಿಲ್ಲ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ.
100 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಗುಡ್ ನ್ಯೂಸ್ ನೀಡಿದ್ದು, ಹಾಸ್ಟೆಲ್ ಗಳಿಗೆ 100 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ ನೀಡಲಾಗುತ್ತದೆ ಎಂದು ಸಚಿವರು ಇತ್ತೀಚೆಗೆ ಹೇಳಿಕೆ ನೀಡಿದ್ದರು. ಬಿಸಿಎಂ ಹಾಸ್ಟೆಲ್ ಗಳಲ್ಲಿ ಮಕ್ಕಳಿಗೆ ಮೂಲಸೌಕರ್ಯಗಳನ್ನು ಹೆಚ್ಚಿಸಲಾಗುತ್ತದೆ. ಮಕ್ಕಳಿಗೆ ಹಾಸಿಗೆ, ಮಂಚ, ಸೋಲಾರ್, ಗೀಸರ್ ಗಳನ್ನು ಒದಗಿಸುವ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದರು, ಹಾಸ್ಟೆಲ್ ಗಳಿಗೆ 100 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ ನೀಡಲಾಗುತ್ತದೆ ಎಂದು ಹೇಳಿದರು.
ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ ಎಂಬ ಸುದ್ದಿ ಹರಿದಾಡಿತ್ತು, ಅಲ್ಲದೇ ಈ ವಿಚಾರ ವ್ಯಾಪಕ ಟೀಕೆಗೂ ಕಾರಣವಾಗಿತ್ತು.ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಕಾರಣಕ್ಕೂ (Pre-Matric Scholarship) ಸ್ಥಗಿತ ಮಾಡಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ.1-8ನೇ ತರಗತಿ SC-ST ವಿದ್ಯಾರ್ಥಿಗಳಿಗೆ ನೀಡುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸ್ಥಗಿತ ಮಾಡಿಲ್ಲ. ವಿದ್ಯಾರ್ಥಿ ವೇತನ ಸ್ಥಗಿತ ಮಾಡಿದ್ದಾರೆ ಎಂಬುದು ಸುಳ್ಳು ಸುದ್ದಿಯಾಗಿದೆ. ಇದು ರಾಜ್ಯ ಸರ್ಕಾರದ ಯೋಜನೆಯಾಗಿದ್ದು, ಇದನ್ನು ಕೈ ಬಿಟ್ಟಿಲ್ಲ, ಇದು ಸುಳ್ಳು ಸುದ್ದಿಯಾಗಿದೆ. ವಿದ್ಯಾರ್ಥಿ ವೇತನ ಯೋಜನೆ ಮುಂದುವರೆಯಲಿದೆ. ಯಾವುದೇ ಕಾರಣಕ್ಕೂ ಯೋಜನೆ ನಿಲ್ಲಿಸೋದಿಲ್ಲ ಎಂದು ಸ್ಪಷ್ಟನೆ ನೀಡಿದ್ದರು.
KARNATAKA JOBS NEWS: 1048 CHO ಹುದ್ದೆಗಳ ನೇಮಕ: ಜಿಲ್ಲಾವಾರು ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ, ಇಲ್ಲಿದೆ ಮಾಹಿತಿ