ಬೆಂಗಳೂರು: ಹೊಸ ವರ್ಷ ಸಂಭ್ರಮಾಚರಣೆಗೆ ರಾಜ್ಯ ಸರ್ಕಾರದಿಂದ ಬ್ರೇಕ್ ಬೀಳುವ ಸಾಧ್ಯತೆ ಇದೇ ಎನ್ನಲಾಗುತ್ತಿದೆ. ಈ ನಡುವೆ ಕೇಂದ್ರ ಸರ್ಕಾರವು ಕೂಡ ಹೆಚ್ಚಿನ ಜನಸಂದಣಿಯಿಂದ ದೂರ ಉಳಿಯುವಂತೆ ಸೂಚನೆ ನೀಡಿದ್ದು, ಈ ಹಿನ್ನಲೆಯಲ್ಲಿ ಈ ಬಗ್ಗೆ ಅಂದ್ರೆ ಹೊಸ ವರ್ಷ ಸಂಭ್ರಮಾಚರಣೆಯಲ್ಲಿ ಹೆಚ್ಚಿನ ಜನತೆಗೆ ಭಾಗವಹಿಸುವ ಕಾರಣದಿಂದ ರಾಜ್ಯ ಸರ್ಕಾರ ಈ ಬಗ್ಗೆ ಇಂದು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆ ಇದೇ.
ಆದರೆ ಸರ್ಕಾರ ಒಂದು ವೇಳೆ ಈ ನಿರ್ಧಾರವನ್ನು ತೆಗೆದುಕೊಂಡರೇ ಸಹಜವಾಗಿ ವ್ಯಾಪಾರಿಗಳು ಅದರಲ್ಲೂ ಹೋಟೆಲ್ ಉದ್ದಿಮೇದಾರರು ಇದಕ್ಕೆ ವಿರೋಧ ವ್ಯಕ್ತಪಡಿಸುವ ಸಾಧ್ಯತೆ ಹೆಚ್ಚಾಗಿದ್ದು, ಈ ಬಗ್ಗೆ ಸರ್ಕಾರ ಯಾವ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ಇದಲ್ಲದೇ ಅಪಾರ್ಟ್ಮೆಂಟ್ಗಳಲ್ಲಿ ಕೂಡ ಹೊಸ ವರ್ಷ ಆಚರಣೆಗಾಗಿ ಹೆಚ್ಚಿನ ಮಂದಿ ಸೇರಲಿದ್ದು, ಇದು ಕೂಡ ಕೋವಿಡ್ ಹೆಚ್ಚು ಮಂದಿಗೆ ಹರಡುವ ಸಾಧ್ಯತೆ ಇದೇೞ