ಬೆಂಗಳೂರು: ಚೀನಾದಲ್ಲಿ ಕೊರೊನಾ ಹೆಚ್ಚಳ ಬೆನ್ನಲ್ಲೆ ರಾಜ್ಯದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮಾರ್ಗಸೂಚಿ ಅನುಸರಿಸಲು ಸೂಚನೆ ನೀಡಲಾಗಿದೆ. ಈ ಬೆನ್ನಲ್ಲೆ ಬಿಎಂಟಿಸಿ ಪ್ರಯಾಣಿಕರಿಗೆ ಕೋವಿಡ್ ಟಫ್ ರೂಲ್ಸ್ ಜಾರಿಯಾಗಿದ್ದು,ಮಾಸ್ಕ್ ಧರಿಸಿದ್ರೆ ಮಾತ್ರ ಸಂಚಾರಕ್ಕೆ ಅವಕಾಶ ಎಂದಿದ್ದಾರೆ
BIGG NEWS : ನನಗೆ ಹುಡುಗಿ ಕರುಣಿಸು, ಪ್ರೀತಿಯ ದೇವರೇ.. : ಚಾಮರಾಜೇಶ್ವರ ದೇವಾಲಯ ಹುಂಡಿ ಎಣಿಕೆ ವೇಳೆ ಭಕ್ತನ ಪತ್ರ
ಈಗಾಗಲೇ ರಾಜ್ಯದಲ್ಲಿಯೂ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಬೊಮ್ಮಾಯಿ ಮುಂದಾಗಿದ್ದು, ರಾಜ್ಯ ಸರ್ಕಾರದಿಂದ ಹೊಸದಾಗಿ ಗೈಡ್ಲೈನ್ಸ್ ರಿಲೀಸ್ ಮಾಡಲಾಗಿದೆ. ಕೋವಿಡ್ ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವಂತೆ ಪ್ರಯಾಣಿಕರಿಗೆ ಬಿಎಂಟಿಸಿ ಸೂಚನೆ ನೀಡಿದೆ. ಅದರ ಜೊತೆ ತನ್ನ ಸಿಬ್ಬಂದಿಗೂ ಕೊರೊನಾ ಮಾರ್ಗಸೂಚಿ ಪಾಲಿಸುವಂತೆ ಸೂಚನೆ ನೀಡಲಾಗಿದೆ.ನಿತ್ಯ ಡಿಪ್ಲೋಗಳಲ್ಲಿ ಬಸ್ಗಳ ಸ್ವಚ್ಛತೆ ಕಾರ್ಯ ನಡೆಯುತ್ತಿದೆ. ಅಗತ್ಯ ಇದ್ರೆ ಬಸ್ಗಳಿಗೆ ಸ್ಯಾನಿಟೈಸರ್ ಮಾಡಲಾಗುತ್ತದೆ ಎಂದು ಬಿಎಂಟಿಸಿ ಮಾಹಿತಿ ತಂತ್ರಜ್ಞಾನ ನಿರ್ದೇಶಕ ಸೂರ್ಯಸೇನ್ ಹೇಳಿದ್ದಾರೆ.
BIGG NEWS : ನನಗೆ ಹುಡುಗಿ ಕರುಣಿಸು, ಪ್ರೀತಿಯ ದೇವರೇ.. : ಚಾಮರಾಜೇಶ್ವರ ದೇವಾಲಯ ಹುಂಡಿ ಎಣಿಕೆ ವೇಳೆ ಭಕ್ತನ ಪತ್ರ
ಕೊರೊನಾ ಮೊದಲ ಮತ್ತು ಎರಡನೇ ಅಲೆಯಲ್ಲಿ ಬಿಎಂಟಿಸಿ ಸೇರಿದಂತೆ ಕೆಎಸ್ಆರ್ಟಿಸಿ ಬಸ್ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಕೊರೊನಾ ಹರಡುವಿಕೆ ಪ್ರಮಾಣ ಇಳಿಕೆಯಾಗುತ್ತಿದ್ದಂತೆ ಕಠಿಣ ನಿಯಮಗಳೊಂದಿಗೆ ಹಂತ ಹಂತವಾಗಿ ಬಸ್ ಸಂಚಾರ ಆರಂಭಗೊಂಡಿತ್ತು.ಆರಂಭದಲ್ಲಿ ಬಸ್ಗಳಲ್ಲಿ ಶೇ.50ರಷ್ಟು ಆಸನಗಳ ಭರ್ತಿಗೆ ಅವಕಾಶ ನೀಡಲಾಗಿತ್ತು. ಆನಂತರ ಶೇ.100ರಷ್ಟು ಆಸನಗಳ ಭರ್ತಿಗೆ ಸಾರಿಗೆ ಸಂಸ್ಥೆ ಅನುಮತಿ ನೀಡಿತ್ತು. ILI/SARI ಪ್ರಕರಣಗಳಿಗೆ ಕೊವಿಡ್ ಟೆಸ್ಟ್ ಮಾಡಿಸುವುದು ಕಡ್ಡಾಯ. ಸೋಂಕಿನ ಲಕ್ಷಣ ಹೊಂದಿರುವವರು, ಖಚಿತ ಪ್ರಕರಣಗಳ ಸಂಪರ್ಕಿತರು ಇನ್ಮುಂದೆ ಕೋವಿಡ್ ಪರೀಕ್ಷೆಗೆ ಒಳಪಡುವುದು ಕಡ್ಡಾಯ ಮಾಡಲಾಗಿದೆ
BIGG NEWS : ನನಗೆ ಹುಡುಗಿ ಕರುಣಿಸು, ಪ್ರೀತಿಯ ದೇವರೇ.. : ಚಾಮರಾಜೇಶ್ವರ ದೇವಾಲಯ ಹುಂಡಿ ಎಣಿಕೆ ವೇಳೆ ಭಕ್ತನ ಪತ್ರ
ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಓಡಾಡೋ ಜನರೇ ಬಿಎಂಟಿಸಿ ಪ್ರಯಾಣಿಸುವ ಮುನ್ನ ಮಾಸ್ಕ್ ಧರಿಸುವುದನ್ನು ತಪ್ಪದೇ ಪಾಲಿಸಿ ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸೋದು ಅತ್ಯಗತ್ಯವಾಗಿದೆ