ಮಂಗಳೂರು : ಭಾರತ ಸ್ಕೌಟ್ಸ್ ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಮತ್ತು ದ.ಕ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆ ಇದರ ಜಂಟಿ ಆಶ್ರಯದಲ್ಲಿ ಅಂತರರಾಷ್ಟ್ರೀಯ ಸ್ಕೌಟ್ಸ್ ಗೈಡ್ಸ್ನ ಸಾಂಸ್ಕøತಿಕ ಜಾಂಬೂರಿ-2022 ಕಾರ್ಯಕ್ರಮ ಡಿಸೆಂಬರ್ 21 ರಿಂದ 27ರ ವರೆಗೂ ನಡೆಯುತ್ತಿದ್ದು ಈ ನಿಟ್ಟಿನಲ್ಲಿ ಡಿ. 25ರಂದು ಮಂಗಳೂರಿನ ಮೂಡುಬಿದಿರೆ ಆಳ್ವಾಸ್ನಲ್ಲಿ ವಿಶ್ವ ಸಾಂಸ್ಕೃತಿಕ ಜಾಂಬೂರಿ ಕಾರ್ಯಕ್ರಮಕ್ಕೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ
ಬೊಮ್ಮಾಯಿ ಅವರು ಸಂಜೆ 4ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು 5ಕ್ಕೆ ಆಳ್ವಾಸ್ ಸಂಸ್ಥೆಯಲ್ಲಿ ನಡೆಯುತ್ತಿರುವ ಜಾಂಬೂರಿಯಲ್ಲಿ ಏಕ್ ಭಾರತ್ ಶ್ರೇಷ್ಠ ಭಾರತ್, ನಮ್ಮ ಸಂಸ್ಕೃತಿ-ಸ್ವತ್ಛ ಸಂಸ್ಕೃತಿ, ಸಂಸ್ಕೃತಿಯಿಂದ ಯುವಜನರ ಒಗ್ಗಟ್ಟು ಕಾರ್ಯಕ್ರಮಗಳ ಅನಾವರಣ ಮಾಡಲಿದ್ದಾರೆ.
ರಾತ್ರಿ 7ಕ್ಕೆ ರಸ್ತೆಯ ಮೂಲಕ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿ 7.50ರ ವಿಮಾನದಲ್ಲಿ ಬೆಳಗಾವಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.