ಬೆಂಗಳೂರು : ಕೊರೊನಾ ಸೋಂಕಿನ ಭೀತಿ ಹಿನ್ನೆಲೆ ರಾಜ್ಯ ಸರ್ಕಾರ ಹಲವು ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾಸ್ಕ್ ಧರಿಸುವಂತೆ ಸಲಹೆ ನೀಡಿದೆ.
ಇದೀಗ ಸರ್ಕಾರದ ಆದೇಶಕ್ಕೂ ಮುನ್ನವೇ ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ ಎನ್ನಲಾಗಿದೆ. ಬೆಂಗಳೂರಿನ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸರ್ಕಾರದ ಆದೇಶಕ್ಕೂ ಮುನ್ನವೇ ಮಕ್ಕಳಿಗೆ ಮಾಸ್ಕ್ ಕಡ್ಡಾಯ ಮಾಡಿದೆ ಎನ್ನಲಾಗಿದೆ.
ಇನ್ನೂ, ಬೆಂಗಳೂರು ವಿವಿ ಸೇರಿದಂತೆ ಬೆಂಗಳೂರು ನಗರದ ಹಲವು ಕಡೆ ಈಗಾಗಲೇ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಮೆಟ್ರೋ , ಬೆಂಗಳೂರಿನ ಏರ್ ಪೋರ್ಟ್ ಗಳಲ್ಲಿ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ.
ಮಾಸ್ಕ್ ಕಡ್ಡಾಯಗೊಳಿಸುವ ಕುರಿತು ಸಚಿವರು ಹೇಳಿದ್ದೇನು..?
ಸಚಿವರು ರಾಜ್ಯದಲ್ಲಿ ಮಾಸ್ಕ್ ಕಡ್ಡಾಯಗೊಳಿಸುವ ಕುರಿತು ಆರೋಗ್ಯ ಸಚಿವ ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಮಾಸ್ಕ್ ಕಡ್ಡಾಯಗೊಳಿಸುವ ಪರಿಸ್ಥಿತಿ ಬಂದರೆ ಖಂಡಿತ ಮಾಡುತ್ತೇವೆ, ಸದ್ಯಕ್ಕೆ ಮಾಸ್ಕ್ ಕಡ್ಡಾಯವಿಲ್ಲ, ಪರಿಸ್ಥಿತಿ ನೋಡಿಕೊಂಡು ಮಾಸ್ಕ್ ಕಡ್ಡಾಯ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಜನರು ಇದಕ್ಕೆ ಅವಕಾಶ ಕೊಡಬಾರದು, ಕಡ್ಡಾಯವಾಗಿ ಕೊರೊನಾ ಮಾರ್ಗಸೂಚಿ ಪಾಲನೆ ಮಾಡಬೇಕು ಎಂದು ಹೇಳಿದ್ದಾರೆ.
ಕೊರೊನಾ ಮಾರ್ಗಸೂಚಿ ಪಾಲಿಸದಿದ್ದರೆ ಬೆಂಗಳೂರಿನಲ್ಲಿ ‘ಕಠಿಣ ನಿಯಮ’ ಜಾರಿಗೆ ತರಲಾಗುತ್ತದೆ ಎಂದು ಆರೋಗ್ಯ ಸಚಿವ ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಜನರು ಸರಿಯಾಗಿ ಕೊರೊನಾ ಮಾರ್ಗಸೂಚಿ ಪಾಲನೆ ಮಾಡಬೇಕು, ಇಲ್ಲವಾದಲ್ಲಿ ಕಠಿಣ ನಿಯಮಗಳನ್ನು ಜಾರಿಗೆ ತರಬೇಕಾಗುತ್ತದೆ, ಮಾಸ್ಕ್ ಕಡ್ಡಾಯವಾಗಿ ಧರಿಸಿ ಕೊರೊನಾ ಮಾರ್ಗಸೂಚಿ ಪಾಲನೆ ಮಾಡಿ ಎಂದು ಸೂಚನೆ ನೀಡಿದರು.
BREAKING NEWS : ವಿಧಾನಪರಿಷತ್ ಉಪಸಭಾಪತಿಯಾಗಿ ‘ಎಂ.ಕೆ ಪ್ರಾಣೇಶ್’ ಆಯ್ಕೆ |M.K Pranesh
.