ಬೆಂಗಳೂರು: ಚೀನಾ ಸೇರಿ ಹಲವು ದೇಶಗಳಲ್ಲಿ ಕೊರೊನಾ ಏರಿಕೆ ಹಿನ್ನೆಲೆ ಕರ್ನಾಟಕಕ್ಕೆ ಕೊರೊನಾ ಭೀತಿ ಶುರುವಾಗಿದೆ. ಈಗಾಗಲೇ ನಗರದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.
ಜೊತೆಗೆ ಅಗತ್ಯ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೊವಿಡ್ ಮಾರ್ಗಸೂಚಿ ಪಾಲಿಸುವಂತೆ ಶಾಲೆಗಳಿಗೆ ಸೂಚನೆ ನೀಡಲಾಗಿದೆ. ಈ ಕುರಿತು ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮೀಟಿಂಗ್ ನಡೆಯುತ್ತಿದೆ. ಈ ಸಭೆಯಲ್ಲಿ ಹೊಸ ವರ್ಷಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಪಶ್ಚಿಮ ವಿಭಾಗದ ಹಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸುಬ್ರಮಣೇಶ್ವರ ರಾವ್, ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಸಭೆಯಲ್ಲಿ ಭಾಗಿಯಾಗಿದ್ದಾರೆ.