ಬೆಳಗಾವಿ: ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನ ಐದನೇ ದಿನಕ್ಕೆ ಕಾಲಿಟ್ಟಿದೆ. ಸದನಕ್ಕೆ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಕಲಾಪಕ್ಕೆ ತಡವಾಗಿ ಹಾಜರಾಗಿದ್ದಾರೆ.
ಉತ್ತರಕರ್ನಾಟಕ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಬಗ್ಗೆ ಚರ್ಚೆಗೆ ಆಗ್ರಹಿಸಿ ವಿಧಾನಸಭೆಯಲ್ಲಿ ಜೆಡಿಎಸ್ ಪಕ್ಷ ನಿಲುವಳಿ ನೋಟಿಸ್ ನೀಡಿದೆ. ನಿಯಮ 69ರಡಿ ಸೋಮವಾರದ ಬಳಿಕ ಚರ್ಚೆಗೆ ಅವಕಾಶ ಕೊಡುವುದಾಗಿ ಸ್ಪೀಕರ್ ಕಾಗೇರಿ ತಿಳಿಸಿದರು.
ಇನ್ನು ಬೆಂಗಳೂರು ನಗರದಲ್ಲಿ ಮತ್ತೆ ಕೊರೊನಾ ಹೆಚ್ಚಳ ಭೀತಿ ಹಿನ್ನೆಲೆಯಲ್ಲಿ ಬೆಳಗಾವಿ ಸುವರ್ಣಸೌಧದಲ್ಲಿ ಆರೋಗ್ಯ ಇಲಾಖೆಯಿಂದ ಅಲರ್ಟ್ ಆಗಿದೆ.ಸುವರ್ಣಸೌಧ ಎಂಟ್ರಿಯಲ್ಲಿ ಥರ್ಮಲ್ ಸ್ಯ್ಕಾನಿಂಗ್ ಮತ್ತು ಮಾಸ್ಕ್ ವ್ಯವಸ್ಥೆ ಮಾಡಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿಗಳು ಜನ ಪ್ರತಿನಿಧಿಗಳು ಮತ್ತು ಜನರಿಗೆ ಥರ್ಮಲ್ ಸ್ಕ್ಯಾನ್ ಮಾಡುತ್ತಿದ್ದಾರೆ.