ಬೆಂಗಳೂರು: ಚೀನಾ ಸೇರಿ ಹಲವು ದೇಶಗಳಲ್ಲಿ ಕೊರೊನಾ ಏರಿಕೆ ಹಿನ್ನೆಲೆ ಕರ್ನಾಟಕಕ್ಕೆ ಕೊರೊನಾ ಭೀತಿ ಶುರುವಾಗಿದೆ. ಈಗಾಗಲೇ ನಗರದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.
ಕೋವಿಡ್ ಮುನ್ನೆಚ್ಚರಿಕೆ ಹಿನ್ನೆಲೆ ನಗರದಲ್ಲಿ ಪೊಲೀಸ್ ಆಯುಕ್ತರು ಸಭೆ ನಡೆಸಿದ್ದು, ಇದೀಗ ಸಭೆ ಮುಕ್ತಾಯವಾಗಿದೆ. ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆಯಾಗಿದ್ದು, ಇಂದು ಸಂಜೆ ಪೊಲೀಸ್ ಸಿಬ್ಬಂದಿಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪಬ್, ಕ್ಲಬ್ ಹೋಟೆಲ್, ಮಾಲೀಕರ ಜೊತೆ ಪೊಲೀಸರು ಇಂದು ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ. ಇಂದು ಸಂಜೆಯೊಳಗೆ ಸಭೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬ್ರಿಗೇಡ್ ರೋಡ್, ಎಂಜಿ ರೋಡ್ ನಲ್ಲಿ ಹೊಸ ವರ್ಷ ಆಚರಣೆ ಬಗ್ಗೆ ಹಾಗೂ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಕೂಡ ಚರ್ಚೆ ನಡೆಸಲಾಯಿತು.
ಕೊವಿಡ್ ಮಾರ್ಗಸೂಚಿ ಪಾಲಿಸುವಂತೆ ಶಾಲೆಗಳಿಗೆ ಸೂಚನೆ ನೀಡಲಾಗಿದೆ. ಈ ಕುರಿತು ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ನೇತೃತ್ವದಲ್ಲಿ ಸಭೆ ನಡೆದಿದೆ. . ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮೀಟಿಂಗ್ ನಡೆಯುತ್ತಿದೆ. ಈ ಸಭೆಯಲ್ಲಿ ಹೊಸ ವರ್ಷಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಪಶ್ಚಿಮ ವಿಭಾಗದ ಹಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸುಬ್ರಮಣೇಶ್ವರ ರಾವ್, ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಸಭೆಯಲ್ಲಿ ಭಾಗಿಯಾಗಿದ್ದರು.
BIGG NEWS : ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳ ಪ್ರಾರಂಭಕ್ಕೆ ಚಿಂತನೆ: ಸಿಎಂ ಬೊಮ್ಮಾಯಿ