ಬೆಳಗಾವಿ : ಬೆಳಗಾವಿ: ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನ ಐದನೇ ದಿನಕ್ಕೆ ಕಾಲಿಟ್ಟಿದೆ. ವಿಧಾನಸಭೆ ಕಲಾಪದಲ್ಲಿ ಚರ್ಚೆ ಜೋರಾಗಿ ನಡೆಯುತ್ತಿದೆ. ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ರಾಜ್ಯದ ಯೋಧರ ಕ್ಷೇಮಾಭಿವೃದ್ಧಿಬಗ್ಗೆ ಪ್ರಸ್ತಾಪ ಮಾಡಲಾಗಿದೆ.
ಈ ಬಗ್ಗೆ ವಿಧಾನಸಭೆಯಲ್ಲಿ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಮನವಿ ದನಿ ಎತ್ತಿದ್ದು, ರಾಜ್ಯದ ಯೋಧರ ಕ್ಷೇಮಾಭಿವೃದ್ಧಿ ಬಗ್ಗೆ ಖಾದರ್ ಪ್ರಸ್ತಾಪ ಮಾಡಿದ್ದಾರೆ. ರಾಜ್ಯದಲ್ಲಿ ಅರೆ ಸೈನಿಕ ಕಲ್ಯಾಣ ಮಂಡಳಿ ಸ್ಥಾಪಿಸುವಂತೆ ಶಾಸಕ ಯು ಟಿ ಖಾದರ್ ಮನವಿ ಮಾಡಿದ್ದಾರೆ.
ಕೇಂದ್ರದ ಅರೆಸೇನಾ ಪಡೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ರಾಜ್ಯದ ಯೋಧರು, ನಿವೃತ್ತ ಯೋಧರು, ಹುತಾತ್ಮ ಕುಟುಂಬಗಳ ಕ್ಷೇಮಾಭಿವೃದ್ಧಿಗೆ ರಾಜ್ಯದಲ್ಲಿ ‘ಅರೆ ಸೈನಿಕ ಕಲ್ಯಾಣ ಮಂಡಳಿ ‘ಸ್ಥಾಪಿಸುವಂತೆ ಶಾಸಕ ಯು ಟಿ ಖಾದರ್ ಮನವಿ ಮಾಡಿದ್ದಾರೆ.
ಇನ್ನೂ, ಸ್ಟಾಂಪ್ ನಾಲ್ಕನೇ ತಿದ್ದುಪಡಿ ವಿಧೇಯಕ ಅಂಗೀಕಾರ. ಬೀದಿ ಬದಿಯ ವ್ಯಾಪಾರಿಗಳಿಗೆ ಆತ್ಮ ನಿರ್ಭರ ನಿಧಿಯಡಿ ಸ್ಟಾಂಪ್ ಶುಲ್ಕ ಮನ್ನಾ ಮಾಡಲು ಅವಕಾಶ ಮಾಡಿಕೊಡುವ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.
ಇನ್ನು ಉತ್ತರಕರ್ನಾಟಕ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಬಗ್ಗೆ ಚರ್ಚೆಗೆ ಆಗ್ರಹಿಸಿ ವಿಧಾನಸಭೆಯಲ್ಲಿ ಜೆಡಿಎಸ್ ಪಕ್ಷ ನಿಲುವಳಿ ನೋಟಿಸ್ ನೀಡಿದೆ. ನಿಯಮ 69ರಡಿ ಸೋಮವಾರದ ಬಳಿಕ ಚರ್ಚೆಗೆ ಅವಕಾಶ ಕೊಡುವುದಾಗಿ ಸ್ಪೀಕರ್ ಕಾಗೇರಿ ತಿಳಿಸಿದರು.
‘ಹಳಿ ತಪ್ಪಿದ ಸರ್ಕಾರ, ಮಿತಿ ಮೀರಿದ ಭ್ರಷ್ಟಾಚಾರ’ : ಬಿಜೆಪಿ ವಿರುದ್ಧ ಟ್ವೀಟ್ ನಲ್ಲಿ ಕಾಂಗ್ರೆಸ್ ಕಿಡಿ
BREAKING NEWS: ವಿಧಾನಸಭೆಯಲ್ಲಿ ಸ್ಟಾಂಪ್ ನಾಲ್ಕನೇ ತಿದ್ದುಪಡಿ ವಿಧೇಯಕ ಅಂಗೀಕಾರ