ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಲಸಿಕೆಯ ಕೊರತೆ ಇಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಏರ್ಪೋಟ್ ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ರಾಜ್ಯದಲ್ಲಿ ಕೋವಿಡ್ ಲಸಿಕೆಯ ಕೊರತೆ ಇಲ್ಲ, 10 ಲಕ್ಷಕ್ಕೂ ಹೆಚ್ಚು ಡೋಸ್ ಇದೆ, ಕೋವಿಶೀಲ್ಡ್, ವ್ಯಾಕ್ಸಿನ್, ನೇಸಲ್ ಇದೆ ಎಂದು ಹೇಳಿದರು.
ಇಂದು ಕೇಂದ್ರ ಸಚಿವರ ಜೊತೆ ಸಭೆ ಇದೆ, ಸಭೆಯಲ್ಲಿ ರಾಜ್ಯದಲ್ಲಿ ಕೈಗೊಂಡ ಕ್ರಮದ ಬಗ್ಗೆ ಮಾಹಿತಿ ನೀಡುತ್ತೇವೆ ಎಂದು ಸಚಿವರು ಹೇಳಿದರು.
ಚೀನಾ ಸೇರಿ ಹಲವು ದೇಶಗಳಲ್ಲಿ ಕೊರೊನಾ ಕಾರ್ಮೋಡ ಆವರಿಸಿದ್ದು, ಇದರಿಂದ ಕರ್ನಾಟಕದಲ್ಲೂ ಆತಂಕ ಶುರುವಾಗಿದೆ. ಈಗಾಗಲೇ ಸರ್ಕಾರ ಕೊರೊನಾ ಕಟ್ಟಿ ಹಾಕಲು ಹಲವು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಈಗಾಗಲೇ ಮಾರ್ಗಸೂಚಿ ಕೂಡ ಪ್ರಕಟವಾಗಿದ್ದು, ಕಡ್ಡಾಯವಾಗಿ ಪಾಲನೆ ಮಾಡುವಂತೆ ಸೂಚನೆ ನೀಡಲಾಗಿದೆ .ಇದೀಗ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಸರ್ಕಾರ ನಾಳೆ ಶನಿವಾರ ಮತ್ತೊಂದು ತುರ್ತು ಸಭೆ ನಡೆಸಲಿದೆ ಎಂದು ಸುವರ್ಣಸೌಧದಲ್ಲಿ ಕಂದಾಯ ಸಚಿವ ಆರ್ ಅಶೋಕ್ ಮಾಹಿತಿ ನೀಡಿದ್ದಾರೆ.
ಕೊರೊನಾ ನಿರ್ವಹಣೆ ಸಂಬಂಧ ನಾಳೆ (ಡಿ.24) ರಾಜ್ಯದ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಚಿವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ ಎಂದು ಸಚಿವ ಅಶೋಕ್ ಮಾಹಿತಿ ನೀಡಿದ್ದಾರೆ. ಸಭೆಯಲ್ಲಿ ಕೊರೊನಾ ನಿರ್ವಹಣೆ ಸಂಬಂಧ ಮತ್ತಷ್ಟು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.
BREAKING NEWS : ‘ಕೊರೊನಾ ಕಂಟ್ರೋಲ್’ ಗೆ ಸಚಿವ ಸುಧಾಕರ್ ನೇತೃತ್ವದಲ್ಲಿ ನಾಳೆ ಮಹತ್ವದ ಸಭೆ ನಿಗದಿ |Covid 19
BIGG NEWS: ಒಕ್ಕಲಿಗರ ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ಒತ್ತಾಯ; ಸಚಿವರು, ಶಾಸಕರ ನಿಯೋಗದಿಂದ ಮನವಿ