ಬೆಂಗಳೂರು: ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಸುಳ್ಳು ಕೇಸ್ ದಾಖಲಿಸಲು ಪಿತೂರಿ ಮಾಡಿದ ಆರೋಪ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗಿದ್ದ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಹಾಗೂ ಮಾಜಿ ಶಾಸಕ ಎಸ್. ಕೆ ಬಸವರಾಜನ್ ಅವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ.
BIGG NEWS : ರಾಜ್ಯದಲ್ಲಿ ‘ಕೋವಿಡ್ ಲಸಿಕೆ’ಯ ಕೊರತೆ ಇಲ್ಲ : ಸಚಿವ ಸುಧಾಕರ್ ಸ್ಪಷ್ಟನೆ
ಎಸ್ ಕೆ ಬಸವರಾಜನ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ರಾಚಯ್ಯ ಅವರ ನೇತೃತ್ವದ ರಜಾಕಾಲೀನ ಏಕಸದಸ್ಯ ಪೀಠವು ಅರ್ಜಿದಾರರ ಕೋರಿಕೆಯನ್ನು ಮಾನ್ಯ ಮಾಡಿದೆ.
ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಹಷ್ಮತ್ ಪಾಷಾ ಅವರು ಅರ್ಜಿದಾರರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 120-ಬಿ , 384., 420 ಮತ್ತು 366 -ಎ ಅಡಿಯಲ್ಲಿ ಆರೋಪ ಮಾಡಲಾಗಿದೆ. ಇದೇ ಆರೋಪ ಸಂಬಂಧ ಈ ಹಿಂದೆ ಅರ್ಜಿದಾರರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿತ್ತು. ನಂತರ ಎರಡನೇ ಎಫ್ ಐಆರ್ ದಾಖಲಿಸಲಾಗಿದೆ. ಒಂದೇ ಪ್ರಕರಣದ ಸಂಬಂಧ ಎರಡೆರಡು ಎಫ್ ಐಆರ್ ದಾಖಲಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ವಾದಿಸಿದರು.