ಬೆಂಗಳೂರು: ವಿದೇಶಗಳಲ್ಲಿ ಕೊರೋನಾ ಸೋಂಕಿನ ( Corona Virus ) ಪ್ರಕರಣಗಳ ಸಂಖ್ಯೆ ಹೆಚ್ಚಳದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಸದ್ಯಕ್ಕೆ ಮಾಸ್ಕ್ ಧರಿಸುವಂತೆ ( Mask Wearing ) ಸಲಹೆ ಮಾಡಲಾಗಿದೆ. ಅಲ್ಲದೇ ಕೋವಿಡ್ ನಿಯಂತ್ರಣ ಕ್ರಮ ಪಾಲಿಸುವಂತೆ ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ಅಗತ್ಯಬಿದ್ದರೇ ಕಠಿಣ ಕ್ರಮ ಜಾರಿಗೊಳಿಸಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ( Minister Dr K Sudhakar ) ತಿಳಿಸಿದ್ದಾರೆ.
Watch : ರೈಲಿನಲ್ಲಿ ಶಾಸ್ತ್ರೀಯ ಸಂಗೀತ ಹಾಡುವ ಮೂಲಕ ಪ್ರಯಾಣಿಕರ ಮನಗೆದ್ದ 8 ವರ್ಷದ ಚೆನ್ನೈ ಪೋರನ Video Viral
ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಇಂದು ಪರಿಶೀಲಿಸಿದ ಬಳಿಕ ಮಾತನಾಡಿದಂತ ಅವರು, ರಾಜ್ಯದಲ್ಲಿ ಕೊರೋನಾ ಲಸಿಕೆಯಲ್ಲಿ ಯಾವುದೇ ಕೊರತೆ ಇಲ್ಲ. ಈಗ ರಾಜ್ಯದಲ್ಲಿ 10 ಲಕ್ಷಕ್ಕೂ ಹೆಚ್ಚು ಡೋಸ್ ಇದೆ. ಕೋವಿಶೀಲ್ಡ್, ಕೋವ್ಯಾಕ್ಸಿನ್, ನೇಸಲ್ ಲಸಿಕೆ ಇದೆ ಎಂದರು.
ಇಂದು ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಜತೆ ಕೇಂದ್ರದ ಆರೋಗ್ಯ ಸಚಿವರಾದ ಮನ್ ಸುಖ್ ಮಾಂಡವೀಯ ಅವರು ಮಧ್ಯಾಹ್ನ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಈ ವಿಡಿಯೋ ಸಂವಾದದಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ರಾಜ್ಯದಲ್ಲಿ ಕೈಗೊಂಡಿರುವಂತ ಕ್ರಮಗಳ ಬಗ್ಗೆ ಮಾಹಿತಿ ನೀಡುತ್ತೇನೆ ಎಂದು ತಿಳಿಸಿದರು.
BREAKING NEWS: ಗಂಗಾ ಕಲ್ಯಾಣ ಯೋಜನೆ ಟೆಂಡರ್ ಬಗ್ಗೆ ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶ
ರಾಜ್ಯದಲ್ಲಿ ಸದ್ಯಕ್ಕೆ ಒಳಾಂಗಣ ಸ್ಥಳಗಳಲ್ಲಿ ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ. ಅಲ್ಲದೇ ದೈಹಿಕ ಅಂತರ ಕಾಪಾಡುವಂತೆ ತಿಳಿಸಲಾಗಿದೆ. ಕೋವಿಡ್ ಹೆಚ್ಚಳವನ್ನು ಗಮನಿಸಿ, ಮುಂದಿನ ದಿನಗಳಲ್ಲಿ ಅಗತ್ಯಬಿದ್ದರೇ ಕಠಿಣ ಕ್ರಮ ಜಾರಿಗೊಳಿಸುವುದಾಗಿ ಹೇಳಿದರು.