ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುವ ಭೀತಿ ಎದುರಾಗಿದೆ. ಕೊರೊನಾ ಸಂಬಂಧ ನಾಳೆ ಬೆಂಗಳೂರಿನಲ್ಲಿ ತುರ್ತು ಸಭೆ ಕರೆದಿದ್ದೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
BIGG NEWS: ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಆರೋಪ; ಎಸ್ ಕೆ ಬಸವರಾಜನ್ ಗೆ ಹೈಕೋರ್ಟ್ ಜಾಮೀನು
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರು ಈ ಬಗ್ಗೆ ಮಾಹಿತಿ ನೀಡಿದ್ದು, ನಾಳೆ ಬೆಳಗ್ಗೆ ವಿಧಾನಸೌಧದಲ್ಲಿ ಕೋವಿಡ್ ಬಗ್ಗೆ ತುರ್ತು ಸಬೆ ಕರೆದಿದ್ದೇನೆ. ವಿಪತ್ತು ನಿರ್ವಹಣಾ ಸಮಿತಿ ಉಪಾಧ್ಯಕ್ಷ ಕೂಡ ನಾನಿರುವುದರಿಂದ ಆರೋಗ್ಯ, ಕಂದಾಯ, ಪೊಲೀಸ್ ಇಲಾಖೆಗಳ ತುರ್ತು ಸಭೆ ಕರೆದಿದ್ದೇನೆ ಎಂದರು.
ಸಭೆಯಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್ ಕೂಡ ಭಾಗಿಯಾಗುತ್ತಾರೆ. ತುರ್ತಾಗಿ ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಚರ್ಚೆ ಮಾಡಲಾಗುವುದು. ಹೊಸ ವರ್ಷಕ್ಕೆ ಕೋವಿಡ್ ನಿಯಮಗಳ ಬಗ್ಗೆಯೂ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.