ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಚಿರತೆ ಹಾವಳಿ ಹೆಚ್ಚಾಗುತ್ತಿದೆ. ಇದರಿಂದ ಮನುಷ್ಯರು, ಸಾಕು ಪ್ರಾಣಿಗಳನ್ನು ಬಲಿ ತೆಗೆದುಕೊಂಡಿದೆ.
BIGG NEWS: ಸ್ನೇಹಿತರ ಜೊತೆ ಕಿರಿಕ್; ಮೊಹಮ್ಮದ್ ನಲಪಾಡ್ ವಿರುದ್ದ ದೂರು ದಾಖಲು
ಸಾರ್ವಜನಿಕರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಟಿ.ನರಸೀಪುರ ತಾಲೂಕಿನ ಉಕ್ಕಲಗೆರೆ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ 7 ವರ್ಷದ ಗಂಡು ಚಿರತೆ ಬಿದ್ದಿದೆ. ಚಿರತೆ ಅರಣ್ಯ ಇಲಾಖೆ ಬೋನಿನಲ್ಲಿ ಇರಿಸಿದ್ದ ಕರು ತಿನ್ನಲು ಬಂದು ಸೆರೆ ಸಿಕ್ಕಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಿರತೆ ಸೆರೆ ಸಿಕ್ಕ ಮಾಹಿತಿ ತಿಳಿದ ಬೆನ್ನಲ್ಲೇ ಸ್ಥಳಕ್ಕೆ ನೂರಾರು ಜನ ಆಗಮಿಸಿದ್ದರು. ಹಾಗೇ ಸೆರೆ ಸಿಕ್ಕ ಚಿರತೆ ಕಳೆದ ಎರಡು ತಿಂಗಳ ಹಿಂದೆ ವಿದ್ಯಾರ್ಥಿ ಮಂಜುನಾಥ್ ಬಲಿ ಪಡೆದಿತ್ತು ಎಂದು ಹೇಳಲಾಗುತ್ತಿದೆ.