ನವದೆಹಲಿ: ಭಾರತ್ ಜೋಡೊ ಯಾತ್ರೆಯಲ್ಲಿ ಬುರ್ಖಾಧಾರಿ ಮಹಿಳೆಯೊಬ್ಬರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಶಿವನ ವಿಗ್ರಹವನ್ನು ಉಡುಗೊರೆಯಾಗಿ ನೀಡಿದರು.
ಟ್ವಿಟರ್ನಲ್ಲಿ ಕಾಂಗ್ರೆಸ್, ಮಹಿಳೆ ರಾಹುಲ್ ಅವರಿಗೆ ವಿಗ್ರಹವನ್ನು ಉಡುಗೊರೆಯಾಗಿ ನೀಡಿದ ಫೋಟೋವನ್ನು ಪೋಸ್ಟ್ ಮಾಡಿದ್ದು, ‘ಈಶ್ವರ ಅಲ್ಲಾ ತೇರೋ ನಾಮ್’ ಎಂದು ಶೀರ್ಷಿಕೆ ನೀಡಿದೆ.
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆ ಶುಕ್ರವಾರ ಹರಿಯಾಣವನ್ನು ಪ್ರವೇಶಿಸಿದ್ದು, ಶನಿವಾರ ದೆಹಲಿ ತಲುಪಲಿದೆ.
ಹರಿಯಾಣದ ಖೇರ್ಲಿ ಲಾಲಾದಿಂದ ಸೋಹ್ನಾದಿಂದ ಪಾದಯಾತ್ರೆ ಪುನಾರಂಭಗೊಂಡ ವೇಳೆ ಹಲವು ಜನರು ಬ್ಯಾನರ್ ಮತ್ತು ಪಕ್ಷದ ಧ್ವಜಗಳನ್ನು ಹಿಡಿದು ಯಾತ್ರೆಯಲ್ಲಿ ಸೇರಿಕೊಂಡ ದೃಶ್ಯಗಳು ಕಂಡ ಬಂದವು.
ईश्वर-अल्लाह तेरो नाम…#BharatJodoYatra pic.twitter.com/fiLvSJVZBi
— Congress (@INCIndia) December 23, 2022
ಈ ಹಿಂದೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ರಾಹುಲ್ ಗಾಂಧಿ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ಗೆ ಪತ್ರ ಬರೆದಿದ್ದರು. ಅದರಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ, ಮಾಸ್ಕ್-ಸ್ಯಾನಿಟೈಸರ್ ಬಳಕೆ ಮಾಡಬೇಕು. ಅನುಸರಿಸಲು ಸಾಧ್ಯವಾಗದಿದ್ದರೆ, ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಷ್ಟ್ರೀಯ ಹಿತಾಸಕ್ತಿಯಿಂದ ಯಾತ್ರೆಯನ್ನು ಮುಂದೂಡುವಂತೆ ಹೇಳಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ್ದ ರಾಹುಲ್ ಗಾಂಧಿಯವರು ಯಾತ್ರೆಯನ್ನು ನಿಲ್ಲಿಸಲು ಬಿಜೆಪಿಯ ಹೊಸ ತಂತ್ರವಾಗಿದೆ ಎಂದು ವಾಗ್ದಾಳಿ ನಡೆಸಿದ್ದರು
ಕೆಲವು ದಿನಗಳ ಹಿಂದೆ ಯಾತ್ರೆಯಲ್ಲಿ ಭಾಗವಹಿಸಿದ್ದ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರಿಗೂ ಕೋವಿಡ್ ದೃಢಪಟ್ಟಿದೆ.
BIGG NEWS: ನಾವು ಯಾರು ಧಮ್ಕಿ ಹಾಕಿಲ್ಲ, ನ್ಯಾಯಯುತ ಬೇಡಿಕೆ ಇಟ್ಟಿದ್ದೇವೆ: ಬಸನಗೌಡ ಪಾಟೀಲ್ ಯತ್ನಾಳ್