ರಾಮನಗರ : ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮುದಗೇರೆ ಗೇಟ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕ್ಯಾಂಟರ್ ವಾಹನಕ್ಕೆ ಟಿಟಿ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
BIGG NEWS : ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ನಿಯಮಬಾಹಿರ ನಿಯೋಜನೆ ರದ್ದು : ಶಿಕ್ಷಣ ಇಲಾಖೆ ಮಹತ್ವದ ಆದೇಶ
ಚನ್ನಪಟ್ಟಣ ತಾಲೂಕಿನ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ಗೆ ಹಿಂಬದಿಯಿಂದ ಬಂದ ಟಿಟಿ ವಾಹನ ಡಿಕ್ಕಿಯಾಗಿದ್ದು, ಟಿಟಿ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಕೃಷ್ಣ ಮತ್ತು ಮಹೇಶ್ ಎಂದು ಗುರುತಿಸಲಾಗಿದೆ.
ಟಿಟಿ ವಾಹನದಲ್ಲಿದ್ದ 5 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಮೃತರು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಚಿಕ್ಕಾಡಿ ನಿವಾಸಿಗಳು ಎಂದು ಗುರುತಿಸಲಾಗಿದೆ. ಚನ್ನಪಟ್ಟಣ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.