ಬೆಂಗಳೂರು: ಚೀನಾ ಸೇರಿದಂತೆ ಹಲವು ವಿದೇಶಗಳಲ್ಲಿ ಕೊರೊನಾ ಹೆಚ್ಚಳವಾಗಿದ್ದು, ಕರ್ನಾಟಕದಲ್ಲಿ ಆತಂಕ ಶುರುವಾಗಿದೆ. ಈಗಾಗಲೇ ನಗರದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಕೊರೊನಾ ಅಬ್ಬರದಿಂದ ಬೆಂಗಳೂರಿನಲ್ಲಿ ಫುಲ್ ಕಟ್ಟೆಚ್ಚರ ವಹಿಸಲಾಗಿದೆ.
BIGG NEWS: ಬೆಂಗಳೂರು ವಿಮಾನ ಪ್ರಯಾಣಿಕರಿಗೆ ಕೋವಿಡ್ ಮಾರ್ಗಸೂಚಿ ಪ್ರಕಟ: ಈ ನಿಯಮ ಪಾಲನೆ ಕಡ್ಡಾಯ
ಕೊರೊನಾ ಬಗ್ಗೆ ಮಾರ್ಷಲ್ ಗಳು ಜಾಗೃತಿಗೆ ಮುಂದಾಗಿದ್ದಾರೆ. ಮಾಸ್ಕ್ ಮತ್ತು ದೈಹಿಕ ಅಂತರ ಕಾಪಾಡುವಂತೆ ಮನವಿ ಮಾಡಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಮಾರ್ಷಲ್ಸ್ ಗಳಿಂದ ಅನೌನ್ಸ್ ಮಾಡಿದ್ದಾರೆ. ನಗರ ಯಶವಂತಪುರ ಸೇರಿ ಹಲವು ಕಡೆ ಕೋವಿಡ್ ಜಾಗೃತಿ ವಹಿಸಲಾಗಿದೆ.ನಗರದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಬಿಎಂಟಿಸಿ ಬಸ್ ಹಾಗೂ ಮೆಟ್ರೋದಲ್ಲೂ ಸಹ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.
BIGG NEWS: ಬೆಂಗಳೂರು ವಿಮಾನ ಪ್ರಯಾಣಿಕರಿಗೆ ಕೋವಿಡ್ ಮಾರ್ಗಸೂಚಿ ಪ್ರಕಟ: ಈ ನಿಯಮ ಪಾಲನೆ ಕಡ್ಡಾಯ
ಇಂದೇ ವೇಳೆ ಮಾಸ್ಕ್ ಇಲ್ಲವೆಂದರೆ ಪ್ರಯಾಣಿಕರಿಗೆ ಅವಕಾಶ ನೀಡುತ್ತಿಲ್ಲ. ಇದೀಗ ನಮ್ಮ ಮೆಟ್ರೋದಲ್ಲಿ ಕೊವಿಡ್ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಪ್ರಯಾಣಿಕರು ಮಾಸ್ಕ್ ಇಲ್ಲವೆಂದರೆ ನಮ್ಮ ಮೆಟ್ರೋದಲ್ಲಿ ಒಳಗೆ ಪ್ರವೇಶ ಮಾಡುವಂತಿಲ್ಲ ಎಂದು ಕ್ರಮ ಕೈಗೊಂಡಿದ್ದಾರೆ.ಇನ್ನು ರೂಪ್ಸಾ ತನ್ನ ಅಧೀನದಲ್ಲಿ ಬರುವ ಕರ್ನಾಟಕದ ಖಾಸಗಿ ಶಾಲೆಗಳ ಜೊತೆ ಸಭೆ ಮಾಡಿದ್ದು, ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಖಾಸಗಿ ಶಾಲೆಗಳಲ್ಲಿ ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕೆಂದು ಮಾರ್ಗಸೂಚಿ ಬಿಡುಗಡೆ ಮಾಡಿದೆ. ನಾಳೆಯಿಂದಲೇ ಅನ್ವಯವಾಗಲಿದೆ.ಇನ್ನು ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕೋವಿಡ್ ಮಾರ್ಗಸೂಚಿ ಪ್ರಕಟಿಸಲಾಗಿದೆ. ದೇಶಾದ್ಯಂತ ಕೋವಿಡ್ ಭೀತಿ ಆವರಿಸಿದೆ. ಪೊಲೀಸ್ ಇಲಾಖೆಯಲ್ಲೂ ಆತಂಕ ಶುರುವಾಗಿದೆ.