ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಭೀತಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹೋಟೆಲ್ ಸಿಬ್ಬಂದಿ ಕಡ್ಡಾಯ ಮಾಸ್ಕ್ ಧರಿಸುವಂತೆ ಹೋಟೆಲ್ ಮಾಲೀಕರ ಸಂಘ ಸೂಚನೆ ನೀಡಿದೆ.
BIGG NEWS: ಬೆಳ್ತಂಗಡಿಯಲ್ಲಿ ಶಾಲಾ ಬಸ್ & ಗೂಡ್ಸ್ ಆಟೋ ನಡುವೆ ಡಿಕ್ಕಿ : ಓರ್ವ ಸಾವು, ಮೂವರ ಸ್ಥಿತಿ ಗಂಭೀರ
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ ಶುರುವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹೋಟೆಲ್ ಗಳಲ್ಲಿ ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಹೋಟೆಲ್ ಮಾಲೀಕರ ಸಂಘ ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಆಟೊ ಮತ್ತು ಕ್ಯಾಬ್ ಚಾಲಕರು ಸ್ವಯಂಪ್ರೇರಿತರಾಗಿ ಮಾಸ್ಕ್ ಧರಿಸಲು ನಿರ್ಧಾರ ಮಾಡಿದ್ದಾರೆ. ಪ್ರಯಾಣಿಕರಿಗೂ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಮನವಿ ಮಾಡುತ್ತಿದ್ದಾರೆ. ಬೀದಿಬದಿ ವ್ಯಾಪಾರಿಗಳೂ ಕೊರೊನಾ ಮುಂಜಾಗ್ರತೆಯ ನಿರ್ಧಾರಕ್ಕೆ ಬೆಂಬಲ ನೀಡಿದ್ದಾರೆ. ಎಲ್ಲ ಬೀದಿಬದಿ ವ್ಯಾಪಾರಿಗಳಿಗೂ ಮಾಸ್ಕ್ ಧರಿಸಿಕೊಂಡೇ ವ್ಯಾಪಾರ ನಿರ್ವಹಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ರಾಜ್ಯ ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಂಗಸ್ವಾಮಿ ಮಾಹಿತಿ ನೀಡಿದ್ದಾರೆ.