ಬೆಂಗಳೂರು : 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಅನುತ್ತೀರ್ಣ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಸಂದಾಯ ಮಾಡಲು ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.
BIGG NEWS: ಮಂಗಳೂರಿನಲ್ಲಿ ಅಕ್ರಮ ಕಸಾಯಿ ಖಾನೆಗೆ ಹಿಂದೂ ಜಾಗರಣಾ ವೇದಿಕೆ ದಾಳಿ; ಆರೋಪಿ ಪೊಲೀಸರ ವಶಕ್ಕೆ
2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಅನುತ್ತೀರ್ಣ ಹಾಗೂ ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಸಂದಾಯ ಮಾಡಲು ಉಲ್ಲೇಖಿತ-3ರ ಸುತ್ತೋಲೆಯನ್ವಯ 12.12.2022 ರವರೆಗೆ ರೂ 1,320/- ವಿಶೇಷ ದಂಡಶುಲ್ಕದೊಂದಿಗೆ ಅವಕಾಶ ನೀಡಲಾಗಿತ್ತು. ಆದರೆ ಪೋಷಕರು ಹಾಗೂ ವಿದ್ಯಾರ್ಥಿಗಳ ದೂರವಾಣಿ ಕರೆ ಮತ್ತು ಮನವಿ ಪತ್ರಗಳ ಮೇರೆಗೆ ಸದರಿ ಪರೀಕ್ಷೆಗೆ ಶುಲ್ಕ ಪಾವತಿಸುವ ದಿನಾಂಕವನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಿ ಆದೇಶಿಸಲಾಗಿದೆ. ಇದು ವಿದ್ಯಾರ್ಥಿಗಳಿಗೆ ಅಂತಿಮ ಅವಕಾಶವಾಗಿದ್ದು, ಮುಂದೆ ಯಾವುದೇ ಕಾರಣಕ್ಕೂ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ ಎಂದು ಇಲಾಖೆ ಸೂಚನೆ ನೀಡಿದೆ.