ಬೆಂಗಳೂರು: ಮುಂಬರುವಂತೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ( 2023 Election ) ಜೆಡಿಎಸ್ ಪಕ್ಷ ( JDS Party ) ಅಧಿಕಾರಕ್ಕೆ ಬಂದರೇ, ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದುಗೊಳಿಸೋದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ( CM Ibrahim ) ಘೋಷಿಸಿದ್ದಾರೆ.
ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸರ್ಕಾರಿ ನೌಕರರು ನಡೆಸುತ್ತಿರುವಂತ ರಾಷ್ಟ್ರೀಯ ಪಿಂಚಣಿ ಯೋಜನೆ ( ಎನ್ ಪಿ ಎಸ್ ) ವಿರುದ್ಧದ ಹೋರಾಟಕ್ಕೆ ಜೆಡಿಎಸ್ ಬೆಂಬಲಿಸಲಿದೆ. ಜೆಡಿಎಸ್ ಪಕ್ಷ ಮುಂಬರುವಂತ ವಿಧಾನಸಭಾ ಚುನಾವಣೆಯ ಪ್ರಣಾಣಿಕೆಯಲ್ಲಿ ಎನ್ ಪಿಎಸ್ ರದ್ದುಗೊಳಿಸುವ ವಿಚಾರವನ್ನು ಸೇರಿಸಲಿದೆ ಎಂದರು.
ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ಎನ್ ಪಿಎಸ್ ರದ್ದುಗೊಳಿಸಲಾಗುತ್ತದೆ ಎಂಬುದಾಗಿ ಇದೇ ಸಂದರ್ಭದಲ್ಲಿ ಅವರು ಘೋಷಿಸಿದರು.