ಹಾವೇರಿ : ರೈತ ಸಮುದಾಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮುಂದಿನ ತಿಂಗಳು ರೈತರಿಗೆ ಡೀಸೆಲ್ ಸಬ್ಸಿಡಿ ನೀಡಲು ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.
Good News : ಕುಂಬಾರ, ಕಮ್ಮಾರ, ಬಡಗಿಗಳಿಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್ : 50 ಸಾವಿರ ರೂ. ನೆರವು ಘೋಷಣೆ
ಸವಣೂರು ತಾಲ್ಲೂಕಿನ ಕಾರಡಗಿ ಶ್ರೀ ವೀರಭದ್ರೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಯಾತ್ರಿನಿವಾಸ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ರೈತ ಶಕ್ತಿ ಡೀಸೆಲ್ ಯೋಜನೆಯನ್ನು ಮುಂದಿನ ತಿಂಗಳಿನಿಂದ ಪ್ರಾರಂಭಿಸಲಾಗುತ್ತಿದೆ. ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯ ಮೂಲಕ 5 ಲಕ್ಷ ಯುವಕರಿಗೆ ಸ್ವಯಂ ಉದ್ಯೋಗ, ಸ್ತ್ರೀ ಸಾಮರ್ಥ್ಯ ಯೋಜನೆಯ ಮೂಲಕ 5 ಲಕ್ಷ ಆರ್ಥಿಕ ಸಹಾಯ ನೀಡಿ ಸ್ವಯಂ ಉದ್ಯೋಗ, ಹೀಗೆ ದುಡಿಯುವ ವರ್ಗಕ್ಕೆ ಆರ್ಥಿಕ ಸಬಲೀಕರಣಗೊಳಿಸಲಾಗುವುದು. ಗ್ರಾಮಗಳ ಮೂಲಭೂತ ಸೌಕರ್ಯ ವೃದ್ಧಿಸಲಾಗುತ್ತಿದೆ ಎಂದರು.
BIGG NEWS : ರಾಜ್ಯದಲ್ಲಿ ಕೋವಿಡ್ ಆತಂಕ : ಹೊಸವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ
ಕೃಷಿ ಇಲಾಖೆ ವತಿಯಿಂದ ರೈತಶಕ್ತಿ ಎಂಬ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ರೈತರಿಗೆ ಕೃಷಿ ಯಂತ್ರೋಪಕರಣಗಳ ಬಳಕೆಯನ್ನು ಪ್ರೋತ್ಸಾಹಿಸಲು ಹಾಗೂ ಇಂಧನವೆಚ್ಚದ ಭಾರವನ್ನು ಕಡಿಮೆ ಮಾಡಲು ಪ್ರತಿ ಎಕರೆಗೆ 250/- ರೂ.ನಂತೆ ಗರಿಷ್ಟ 5 ಎಕರೆಯವರೆಗೆ 1250/- ರೂ.ಗಳನ್ನು ಡಿಬಿಟಿ ಮೂಲಕ ಡೀಸೆಲ್ ಸಬ್ಸಿಡಿ ನೀಡುವ ರೈತಶಕ್ತಿ ಯೋಜನೆ ಇದಾಗಿದೆ.