ಮಂಗಳೂರು: ಕಾಟಿಪಳ್ಳದಲ್ಲಿ ಚಾಕು ಇರಿದು ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಸುತ್ತಮುತ್ತ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ.
ಇದೀಗ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದೆ. ಮಂಗಳೂರಿನ ಸುರತ್ಕಲ್ ಪೇಟೆಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು. ಸುರತ್ಕಲ್ ಜಂಕ್ಷನ್ನಲ್ಲಿ 3 ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಅಲ್ಲದೆ, ಸುರತ್ಕಲ್ ಪೇಟೆ-ಕಾಟಿಪಳ್ಳ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದು, ನಗರದ ಆಯಕಟ್ಟಿನ ಸ್ಥಳಗಳಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ.
ಮಾತ್ರವಲ್ಲದೆ ಮುನ್ನೆಚ್ಚರಿಕಾ ಕ್ರಮವಾಗಿ ಸುರತ್ಕಲ್, ಬಜ್ಪೆ, ಕಾವೂರು, ಪಣಂಬೂರಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.ಇನ್ನು ಕೊಲೆಯಾದ ಜಲೀಲ್ ಮೃತದೇಹದ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದೆ. ಅದರಂತೆ ಪೊಲೀಸರು ಜಲೀಲ್ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಿದ್ದಾರೆ. ಮೃತದೇಹವನ್ನು ಸುರತ್ಕಲ್ ಮೂಲಕ ಬಿಗಿ ಪೊಲೀಸ್ ಭದ್ರತೆ ಮೂಲಕ ಕಾಟಿಪಳ್ಳಕ್ಕೆ ರವಾನಿಸಲಾಗಿದೆ.