ಬೆಳಗಾವಿ : ಬೆಳಗಾವಿ ತಾಲೂಕಿನ ಶಿಂದೊಳ್ಳಿ ಗ್ರಾಮದಲ್ಲಿ ತಡರಾತ್ರಿ ಅಪರಿಚಿತರು ಚಾಕುವಿನಿಂದ ಇರಿದು ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಶಿಂದೊಳ್ಳಿ ಗ್ರಾಮದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿದ್ದ ವೇಳೆ ಬಂದ ದುಷ್ಕರ್ಮಿಗಳು ಇಬ್ಬರು ವ್ಯಕ್ತಿಗಳ ಮೇಲೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಬಸವರಾಜ ಬೆಳಗಾಂವಾಕ್ಕರ್ (23), ಗಿರೀಶ್ ನಾಗಣ್ಣನವರ್ (34) ಮೃತರು ಎಂದು ಗುರುತಿಸಲಾಗಿದೆ.
ಶಿಂದೊಳ್ಳಿ ಗ್ರಾಮದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿತ್ತು. ಈ ವೇಳೆ ಮೈದಾನಕ್ಕೆ ಅಪರಿಚಿತ ವಾಹನ ನುಗ್ಗಿದ್ದು, ಯುವಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಳಿಕ ವಾಹನದಿಂದ ಕೆಳಗಿಳಿದ ಅಪರಿಚಿತರು ಇಬ್ಬರು ಯುವಕರ ಮೇಲೆ ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಸದ್ಯ ಮೃತದೇಹಗಳನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಆಸ್ಪತ್ರೆ ಬಳಿ ಮುನ್ನೆಚ್ಚರಿಕಾ ಕ್ರಮವಾಗಿ ಕೆಎಸ್ ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ.
Good News : ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಅಕ್ಕಿಗೆ ಪ್ರತ್ಯೇಕ `BPL ಕಾರ್ಡ್’ ವಿತರಣೆ