ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಮಠದ ಶ್ರೀಗಳ ವಿರುದ್ಧ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಜೈಲಿಗೆ ಹೋಗಿದ್ದರು.ಇದೀಗ ಹೈಕೋರ್ಟ್ ನಲ್ಲಿ ಅವರಿಗೆ ಜಾಮೀನು ಮಂಜೂರು ಮಾಡಿದೆ. ಹಾಗಾಗಿ ಅವರು ಇಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
BIGG NEWS : ಅಬ್ದುಲ್ ಜಲೀಲ್ ಹತ್ಯೆ ಪ್ರಕರಣ : ಶೀಘ್ರವೇ ಆರೋಪಿಗಳ ಬಂಧನ : ಸಿಎಂ ಬೊಮ್ಮಾಯಿ
ನವೆಂಬರ್ 10ರಂದು ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಬಸವರಾಜನ್ ನ್ಯಾಯಾಂಗ ಬಂಧನದಲ್ಲಿದ್ದರು. ಈ ನಡುವೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಕೋರ್ಟ್ ಆ ಅರ್ಜಿಯನ್ನು ವಜಾಗೊಳಿಸಿತ್ತು. ಇದೀಗ ಬೆಂಗಳೂರು ಹೈಕೋರ್ಟ್ನಲ್ಲಿ ಜಾಮೀನು ಮಂಜೂರಾದ ಹಿನ್ನಲೆ ಬಿಡುಗಡೆಯಾಗುತ್ತಿದ್ದಾರೆ.
BIGG NEWS : ಅಬ್ದುಲ್ ಜಲೀಲ್ ಹತ್ಯೆ ಪ್ರಕರಣ : ಶೀಘ್ರವೇ ಆರೋಪಿಗಳ ಬಂಧನ : ಸಿಎಂ ಬೊಮ್ಮಾಯಿ
ಇಂದು ಹೈಕೋರ್ಟ್ನ ಅಧಿಕೃತ ಆದೇಶ ಪ್ರತಿ ಪಡೆದು ಜಿಲ್ಲಾ ಕೋರ್ಟ್ಗೆ ಸಲ್ಲಿಕೆ ಮಾಡಲಾಗುತ್ತಿದ್ದು, ಬಳಿಕ ಜಿಲ್ಲಾ ಕಾರಾಗೃಹದಿಂದ ಬಸವರಾಜನ್ ಅವರನ್ನು ಬಿಡುಗಡೆ ಮಾಡಲಾಗುತ್ತದೆ.
ಡಿಸೆಂಬರ್ 22ರಂದು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠದಿಂದ ಜಾಮೀನು ದೊರೆತಿತ್ತು. ಬಾಲಕಿಯರಿಗೆ ದೂರು ನೀಡಲು ಪ್ರಚೋದಿಸಿ ಮುರುಘಾಶ್ರೀ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ ಎಂದು ಆರೋಪಿಸಿ ಬಸವಪ್ರಭು ಸ್ವಾಮೀಜಿ ಅವರು, ಬಸವರಾಜನ್ ವಿರುದ್ಧ ದೂರು ನೀಡಿದ್ದರು