ಬೆಂಗಳೂರು: ಚೀನಾ ಸೇರಿದಂತೆ ಹಲವು ವಿದೇಶಿಗಳಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಆತಂಕ ಶುರುವಾಗಿದೆ.
BIGG NEWS : ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಈ ಕಾರಣಕ್ಕೆ ಕೊಲೆ?
ಈಗಾಗಲೇ ನಗರದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ್ದು, ನಮ್ಮ ಮೆಟ್ರೋ ಮತ್ತು ಬಿಎಂಟಿಸಿ ಬಸ್ ಗಳಲ್ಲಿ ಕೋವಿಡ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹೀಗಾಗಿ ಪ್ರಯಾಣಿಕರು ಈ ನಿಯಮವನ್ನು ಪಾಲಿಸಬೇಕಾಗಿದೆ.
ಇದೀಗ ರಾಜ್ಯ ಸರ್ಕಾರ ಕೊರೊನಾ ಆರಂಭದಲ್ಲೇ ಲಗಾಮು ಹಾಕಲು ಸಜ್ಜಾಗಿದ್ದಾರೆ. ನಗರದಲ್ಲಿ ಕೊರೊನಾ ಟೆಸ್ಟಿಂಗ್ ಹೆಚ್ಚಳಕ್ಕೆ ಸರ್ಕಾರ ನಿರ್ಧಾರ ಸಾಧ್ಯತೆ ಇದೆ. ಕೊರೊನಾ ಟೆಸ್ಟ್ ಹೆಚ್ಚಳಕ್ಕೆ ನಿರ್ದೇಶನ ನೀಡಬಹುದು. ಪ್ರಸ್ತುತ ಪ್ರತಿದಿನ ಒಂದು ಸಾವಿರ ಕೊರೊನಾ ಟೆಸ್ಟ್ ಮಾಡಲಾಗುತ್ತಿದೆ. ಇನ್ಮುಂದೆ ಕೊರೊನಾ ಟೆಸ್ಟ್ ಹೆಚ್ಚಳ ಮಾಡುವ ಸಾಧ್ಯತೆ ಇದೆ.
BIGG NEWS : ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಈ ಕಾರಣಕ್ಕೆ ಕೊಲೆ?
ಇನ್ನು ಇಂದು ರಾಜ್ಯ ಸರ್ಕಾರವು ಮಹತ್ವದ ಸಭೆ ನಡೆಸಲಿದೆ.ಕೊವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಹೈವೋಲ್ಟೇಜ್ ಮೀಟಿಂಗ್ ನಡೆಯಲಿದೆ. ಸಭೆಯಲ್ಲಿ ಆರೋಗ್ಯ ಇಲಾಖೆ ಸಚಿವ ಡಾ.ಕೆ.ಸುಧಾಕರ್, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಹೊಸ ವರ್ಷಾಚರಣೆ ಬಗ್ಗೆ ಮತ್ತೊಂದು ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.