ಬೆಂಗಳೂರು : ಚೀನಾದಲ್ಲಿ ಅಬ್ಬರಿಸುತ್ತಿರುವ ಕೊರೊನಾ ವೈರಸ್ ರೂಪಾಂತರಿ BF.7 ಬೆಂಗಳೂರಿಗೂ ಕಾಲಿಟ್ಟಿದ್ದು, ಚೀನಾದಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿಗೆ BF.7 ಕೊರೊನಾ ಸೋಂಕಿನ ಶಂಕೆ ವ್ಯಕ್ತವಾಗಿದೆ.
BIGG NEWS: ಬೆಳಗಾವಿಯಲ್ಲಿ ವಿದ್ಯಾರ್ಥಿನಿಯರ ಜೊತೆ ಶಿಕ್ಷಕನ ಅಸಭ್ಯ ವರ್ತನೆ; ಕಾಮುಕ ಶಿಕ್ಷಕನ ವಿರುದ್ಧ ಕೇಸ್
ಚೀನಾದಿಂದ ಬೆಂಗಳೂರಿಗೆ ಬಂದ ಆಗ್ರಾ ಮೂಲದ 35 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ತಕ್ಷಣವೇ ವ್ಯಕ್ತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವ್ಯಕ್ತಿಗೆ ಕೊರೊನಾ ರೂಪಾಂತರಿ BF.7 ಸೋಂಕು ಇದೆ ಎಂದು ಶಂಕಿಸಲಾಗಿದೆ.
ಚೀನಾ ಸೇರಿದಂತೆ ಹೈರಿಸ್ಕ್ ಇರುವ ದೇಶಗಳಿಂದ ಬೆಂಗಳೂರಿನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ 9 ಪ್ರಯಾಣಿಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎನ್ನಲಾಗಿದ್ದು, ಸದ್ಯಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೋವಿಡ್ ಟೆಸ್ಟ್ ಹೆಚ್ಚಿಸಲಾಗಿದೆ.