ಬೆಂಗಳೂರು: ಚೀನಾದಿಂದ ಬೆಂಗಳೂರಿಗೆ ಬಂದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ವಿಚಾರವಾಗಿ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಪ್ರತಿಕ್ರಿಯೆ ನೀಡಿದ್ದಾರೆ. ಆತ ಚೀನಾದಿಂದ ಬೆಂಗಳೂರಿನ ಒಳಗೆ ಬಂದಿಲ್ಲ ಎಂದು ಹೇಳಿದ್ದಾರೆ.
ನಗರದಲ್ಲಿ ಮಾತನಾಡಿ ಅವರು, ಆತ ಚೀನಾದಿಂದ ನೇರವಾಗಿ ಬೆಂಗಳೂರಿಗೆ ಬಂದಿಲ್ಲ. ಆತ ಏರ್ ಪೋರ್ಟ್ ಗೆ ಬಂದು ಅಲ್ಲಿಂದ ಆಗ್ರಾಕ್ಕೆ ಹೋಗಿದ್ದಾನೆ .ಹೀಗಾಗಿ ಏರ್ಪೋರ್ಟ್ ನಿಂದ ಹೆಚ್ಚಿನ ಮಾಹಿತಿ ಪಡೆಯುತ್ತಿದ್ದೇವೆ. ಈ ಕುರಿತು ಬಿಬಿಎಂಪಿ ವಿಶೇಷ ಆಯುಕ್ತ ತ್ರಿಲೋಕಚಂದ್ರ ಜತೆ ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಇನ್ನು ಚೀನಾದಿಂದ ಬೆಂಗಳೂರಿಗೆ ಬಂದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಬಂದಿದೆ. 35 ವರ್ಷದ ವ್ಯಕ್ತಿ ನಿನ್ನೆ ಚೀನಾದಿಂದ ಬೆಂಗಳೂರಿಗೆ ಬಂದಿದ್ದರು. ಈ ವೇಳೆ ಕೊರೊನಾ ಟೆಸ್ಟ ಮಾಡಿದಾಗ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು BF7 ನಾ ಎಂದು ತಿಳಿದುಕೊಳ್ಳಲು ಸೋಂಕಿತ ವ್ಯಕ್ತಿಯ ಸ್ಯಾಂಪಲ್ಸ್ ಅನ್ನ ಜಿನೋಮಿಕ್ ಸೀಕ್ವೆನ್ಸಿಂಗ್ ಮಾಡಲಾಗಿದೆ. ಕಳೆದ ಮೂರು ದಿನಗಳಲ್ಲಿ ವಿದೇಶಗಳಿಂದ ಬಂದ 9 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.